ಬೆಂಗಳೂರು:ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್​ ಜಿಹಾದ್​ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ.
ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಯುವ ಮೋರ್ಚಾ ರಾಷ್ಟ್ರಾಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಚಿತ್ರವನ್ನು ವೀಕ್ಷಿಸಲಿದ್ದಾರೆ.
ಭಾನುವಾರ ಸಂಜೆ 8:45ರ ಸುಮಾರಿಗೆ ನಗರದ ಗರುಡ ಮಾಲ್​ನಲ್ಲಿ ನಡ್ಡಾ ಹಾಗೂ ತೇಜಸ್ವಿ ಸೂರ್ಯ ಚಿತ್ರ ವೀಕ್ಷಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕಾಂಗ್ರೆಸ್​ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ದುರದೃಷ್ಟಕರ: ಶ್ರೀನಿವಾಸ್ ​ಪ್ರಸಾದ್​
ಈ ಕುರಿತು ಟ್ವೀಟ್​ ಮಾಡಿರುವ ಸಂಸದ ತೇಜಸ್ವಿ ಸೂರ್ಯ ದಿ ಕೇರಳ ಸ್ಟೋರಿ ಚಿತ್ರವು ಈ ದೇಶದ ಇತರ ಭಾಗಗಳಲ್ಲಿನ ಸಾಮಾಜಿಕ ಸಮಸ್ಯೆ ಹಾಗೂ ದಾಖಲೆಗಳನ್ನು ಪ್ರತಿಬಿಂಬಿಸುವ ಸಿನಿಮಾ.
ಇದು ನಮ್ಮ ದೇಶದ ಹೆಣ್ಣು ಮಕ್ಕಳಿಗಾಗಿ ಮಹತ್ವದ ಸಂದೇಶವನ್ನು ಹೊಂದಿದೆ. ಚಿತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾನುವಾರ ಸಂಜೆ 8:45ಕ್ಕೆ ನಗರದ ಗರುಡ ಮಾಲ್​ನಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ.
'The Kerala Story’ is an important movie documenting & reflecting social issues of our times, in Kerala & other parts of the country. It has a salient message for our young women.We are inviting young girl students of Bengaluru to join National President of BJP Sri@JPNaddaJi…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
