ನವದೆಹಲಿ:ಒಂದೆಡೆ ಚೀನಾ, ಇನ್ನೊಂದೆಡೆ ಪಾಕಿಸ್ತಾನ. ಎರಡರೊಂದಿಗೂ ಭಾರತ ಗುದ್ದಾಡಬೇಕಿದೆ. ಸದ್ಯ ಚೀನಾದೊಂದಿಗಿನ ಭಾರತದ ಉದ್ವಿಗ್ನ ಗಡಿ ವಿವಾದದ ಹಿನ್ನೆಲೆಯಲ್ಲಿ ಸಶಸ್ತ್ರ ಪಡೆಗಳ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕಾರಣದಿಂದ 38,900 ಕೋಟಿ ರೂ.ಗಳ ವೆಚ್ಚದಲ್ಲಿ ಹಲವಾರು ಮುಂಚೂಣಿಯ ಯುದ್ಧವಿಮಾನಗಳು, ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯ ಇಂದು ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
21 ಮಿಗ್ -29 ಯುದ್ಧವಿಮಾನಗಳನ್ನು ರಷ್ಯಾದಿಂದ ಖರೀದಿಸಲಾಗುತ್ತಿದ್ದು, 12 ಸು -30 ಎಂಕೆಐ ವಿಮಾನಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ ಖರೀದಿಸಲಾಗುತ್ತಿದೆ. ಹಾಲಿ ಇರುವ 59 ಮಿಗ್ -29 ವಿಮಾನಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರತ್ಯೇಕ ಪ್ರಸ್ತಾವಕ್ಕೂ ಸಚಿವಾಲಯ ಅನುಮೋದನೆ ನೀಡಿದೆ.
ಇದನ್ನೂ ಓದಿ:ಇಂಗು ತಿಂದ ಮಂಗನಂತಾದ ರಾಜ್ಯ ಸರ್ಕಾರ: ಕುಮಾರಸ್ವಾಮಿ ಟೀಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
21 ಮಿಗ್ -29 ಖರೀದಿ ಮತ್ತು ಈಗಿರುವ ಮಿಗ್ -29 ನೌಕಾಪಡೆಯ ನವೀಕರಣಕ್ಕೆ ಸರ್ಕಾರಕ್ಕೆ 7,418 ಕೋಟಿ ರೂ. ವೆಚ್ಚವಾಗಲಿದ್ದು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 12 ಹೊಸ ಸು -30 ಎಂಕೆಐ ಖರೀದಿಸಲು 10,730 ಕೋಟಿ ರೂ ವೆಚ್ಚ ಮಾಡಲಾಗುವುದು ಎಂದು ಹೇಳಲಾಗಿದೆ.
ನೌಕಾಪಡೆ ಮತ್ತು ವಾಯುಪಡೆಗಾಗಿ 1,000 ಕಿ.ಮೀ ಮತ್ತು ಅಸ್ಟ್ರಾ ಕ್ಷಿಪಣಿಗಳನ್ನು ಹೊಂದಿರುವ ದೀರ್ಘ ಶ್ರೇಣಿಯ ಭೂ ದಾಳಿ ಕ್ರೂಸ್ ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲು ಕೂಡ ಈ ಸಂದರ್ಭದಲ್ಲಿ ಅನುಮೋದನೆ ದೊರೆತಿದೆ.

ವೈದ್ಯರಿಗೆ ವರ್ಷಾಂತ್ಯದವರೆಗೂ ವಿಮಾನದಲ್ಲಿ ರಿಯಾಯಿತಿ ನೀಡಿದ ಇಂಡಿಗೋ


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
