ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್​​ ಷಾ ಅವರು ಎಸಿ, ಎಸ್​​ಟಿ, ಒಬಿಸಿ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು ಭಾಷಣವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ:ಜಾರ್ಖಂಡ್: ಗಂಡೇ ವಿಧಾನಸಭಾ ಕ್ಷೇತ್ರದಿಂದ ಹೇಮಂತ್ ಸೋರೆನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ
ಎಕ್ಸ್​ನಲ್ಲಿ ನಕಲಿ ವಿಡಿಯೋವನ್ನು ಪೋಸ್ಟ್ ಮಾಡಲು ಬಳಸಲಾಗಿದೆ ಎಂದು ಹೇಳಲಾದ ರೇವಂತ್​ ರೆಡ್ಡಿ ಅವರ ಮೊಬೈಲ್​ ಅನ್ನು ತೆಗೆದುಕೊಂಡು ಬರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಮಾಧ್ಯಮಗಳು ಮಾಡಿವೆ.
ಮೇ 1ಕ್ಕೆ ವಿಚಾರಣೆಗೆ ಬರುವಂತೆ ದೆಹಲಿ ಪೊಲೀಸರು ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಹೇಳಿದ್ದಾರೆ. ಜೊತೆಗೆ ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ತರುವಂತೆ ತಿಳಿಸಿದ್ದಾರೆ. ಅಮಿತ್​​ ಷಾ ಅವರ ಭಾಷಣವನ್ನು ಎಡಿಟ್​​​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನೂ ಐದು ಜನರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಲಿದ್ದಾರೆ.
ಅಮಿತ್ ಷಾ ಕುರಿತಾದ ನಕಲಿ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡುವುದಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯ ದೂರಿನ ಮೇರೆಗೆ ದೆಹಲಿ ಪೊಲೀಸರು ಸಿಎಂ ರೇವಂತ್​ ರೆಡ್ಡಿ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಿದ್ದರು.
ಕಾಂಬೋಡಿಯಾ ಸೇನಾನೆಲೆಯಲ್ಲಿ ಸ್ಫೋಟ: 20 ಸೈನಿಕರು ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
