ನವದೆಹಲಿ:ಲೋಕಸಭೆ ಚುನಾವಣೆಯ ಮತಎಣಿಕೆಯಲ್ಲಿ ಗುಜರಾತ್​ ಗಾಂಧಿನಗರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮಿತ್ ಷಾ ಅವರು 7.44 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಷಾ ಮುಂದೆ ಸ್ಪರ್ಧಿಸಿದರು.
ಇದನ್ನೂ ಓದಿ:ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವು!
ಈ ಕುರಿತು ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಕಾಂಗ್ರೆಸ್‌ನ ಸೋನಲ್‌ ರಮಣ್‌ಭಾಯಿ ಪಟೇಲ್‌ ವಿರುದ್ಧ ಅಮಿತ್‌ ಶಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 2019ರಲ್ಲಿಯೂ ಅಮಿತ್‌ ಶಾ ಅವರು ಗಾಂಧಿನಗರದಲ್ಲಿ 5.57 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗಲೂ ಅವರ ಗೆಲುವಿನ ಅಂತರ ಜಾಸ್ತಿಯಾಗಿದೆ.
ಕಳೆದ ಬಾರಿ ಅಮಿತ್ ಷಾ ಅವರು 5.57 ಲಕ್ಷ ಅಧಿಕ ಮತಗಳ ಅಂತದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಅಮಿತ್ ಷಾ ಅವರು ತಮ್ಮ ಗೆಲುವಿನ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ. ಈ ಬಾರಿ 10,10,972 ಮತಗಳನ್ನು ಷಾ ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರತಿಸ್ಪರ್ಧಿಗಿಂತ 7,44,716 ಹೆಚ್ಚು ಮತ ಗಳಿಸಿದ್ದಾರೆ.
ಅಮಿತ್ ಷಾ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸೋನಲ್‌ ರಮಣ್‌ಭಾಯಿ ಪಟೇಲ್‌ ಅವರಿಗೆ 2,66,256 ಮತಗಳು ಲಭಿಸಿವೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಷಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.
ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​​​ ಗುಜರಾತ್​​​ನಲ್ಲಿ ತನ್ನ ಖಾತೆ ತೆರೆಯಲು ಹೆಣಗಾಡುತ್ತಿದೆ. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿನಗರ ಬಿಜೆಪಿ ಭದ್ರಕೋಟೆ.
ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು: ಕಿಶೋರಿ ಲಾಲ್‌ ಶರ್ಮಾಗೆ ದಾಖಲೆಯ ಗೆಲುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
