ರಾಯ್​ ಬರೇಲಿ:ತಮ್ಮ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ವ್ಯಕ್ತಿ ಸಾವು: ಕಾರಣ ಹೀಗಿದೆ..!
ರಾಯ್​ ಬರೇಲಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿ ಕುಟುಂಬವು ಸುಳ್ಳು ಹೇಳುವುದರಲ್ಲಿ ನಿಪುಣರು ಎಂದ ಗೃಹ ಸಚಿವರು ಈ ಕ್ಷೇತ್ರದಿಂದ ಕುಟುಂಬಕ್ಕೆ ಹಲವು ವರ್ಷಗಳಿಂದ ಅವಕಾಶ ನೀಡಿದ್ದೀರಿ. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಕಾಂಗ್ರೆಸ್​ಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿ ದಿನೇಶ್​ ಪ್ರತಾಪ್​ ಸಿಂಗ್​ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ ಅವರು, ರಾಯ್ ಬರೇಲಿಯನ್ನು ಮೋದಿ ಅವರ ಅಭಿವೃದ್ಧಿ ಪಯಣದಲ್ಲಿ ಸೇರಿಸುತ್ತೇವೆ ಎಂದು ಭರವಸೆ ನೀಡಿದರು. ರಾಯ್ಬರೇಲಿ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ಮತದಾನ ನಡೆಯಲಿದೆ.
ಪ್ರತಾಪ್‌ಗಢದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ ಅವರು, ರಾಹುಲ್ ಗಾಂಧಿ ಪಾಕಿಸ್ತಾನದ “ಅಣುಬಾಂಬ್”ಗೆ ಹೆದರಬಹುದು ಆದರೆ ಬಿಜೆಪಿ ಅಲ್ಲ, ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು ಮತ್ತು “ನಾವು ಅದನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯನ್ನು ಅವರು ಉಲ್ಲೇಖಿಸಿದ್ದಾರೆ.
ನೀವೇನು ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯೇ? ರಾಹುಲ್‌ ಗಾಂಧಿಗೆ ಸ್ಮೃತಿ ಇರಾನಿ ತಿರುಗೇಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 5 =
Remember me
