ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್​ ಷಾ ಕರೊನಾ ವೈರಾಣು ಸೋಂಕಿನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಯಾವುದೇ ಕ್ಷಣದಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಬಹುದು ಎಂದು ಬಿಜೆಪಿ ಮುಖಂಡ ಮನೋಜ್​ ತಿವಾರಿ ಟ್ವೀಟ್​ ಮಾಡಿದ್ದಾರೆ.
ಅಮಿತ್​ ಷಾ ಅವರು ಆ.2ರಂದು ಕೋವಿಡ್​ ಸೋಂಕಿಗೆ ತುತ್ತಾಗಿದ್ದರು. ಆರಂಭಿಕ ಲಕ್ಷಣಗಳು ಕಂಡುಬರುತ್ತಲೇ ಅವರು ಟೆಸ್ಟ್​ ಮಾಡಿಸಿಕೊಂಡಿದ್ದು, ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ, ಅವರು ದೆಹಲಿಯ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ತಮಗೆ ಸೋಂಕು ತಗುಲಿರುವುದು ಖಚಿತಪಡುತ್ತಿದ್ದಂತೆ ಟ್ವೀಟ್​ ಮಾಡಿದ್ದ ಅವರು, ಆರಂಭಿಕ ಲಕ್ಷಣಗಳು ಕಾಣಿಸುತ್ತಿದ್ದಂತೆ ಪರೀಕ್ಷೆ ಮಾಡಿಸಿಕೊಂಡೆ. ನನ್ನ ಆರೊಗ್ಯ ಚೆನ್ನಾಗಿದ್ದರೂ, ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ನಿಮ್ಮನ್ನು ನೀವು ಪ್ರತ್ಯೇಕಗೊಳಿಸುವ ಜತೆಗೆ ಪರೀಕ್ಷೆಯನ್ನೂ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದರು.
ಚಿತ್ರದುರ್ಗದ ಬಳಿಕ, ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆ ದತ್ತು ಪಡೆದ ಕಿಚ್ಚ ಸುದೀಪ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 17 =
Remember me
