ಕೋಲ್ಕತ್ತಾ: ವಿರೋಧ ಪಕ್ಷಗಳ ನಾಯಕರೊಂದಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಚರ್ಚೆಗೆ ತಾವು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ನೀಡಿರುವ ಹೇಳಿಕೆಗೆ ತೃಣಮೂಲ ಕಾಂಗ್ರೆಸ್​ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಮೊದಲು ಸಂವಿಧಾನ ಓದಿಕೊಂಡು ನಂತರ ಚರ್ಚೆಗೆ ಕರೆಯಲಿ ಎಂದು ತೃಣಮೂಲ ಕಾಂಗ್ರೆಸ್​ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಮಾತನಾಡಿ, ಗೃಹ ಸಚಿವ ಅಮಿತ್​ ಷಾ ಅವರು ಕಾಯ್ದೆ ಬಗ್ಗೆ ಇತರರಿಗೆ ಧೈರ್ಯ ತುಂಬುವ ಮೊದಲು ಈ ವಿಷಯದ ಬಗ್ಗೆ ಚೆನ್ನಾಗಿ ತಿಳಿದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋಲ್ಕತ್ತಾದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್​ನ ರಾಹುಲ್​ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್​ ಯಾದವ್​ ಅವರೊಂದಿಗೆ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 5 =
Remember me
