ನವದೆಹಲಿ:ಲಾಕ್​ಡೌನ್​ನಿಂದ ದೇಶದ ವಿವಿಧೆಡೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ಸಲುವಾಗಿ ಕೇಂದ್ರ ಸರ್ಕಾರ ಶ್ರಮಿಕ್​ ವಿಶೇಷ ರೈಲು ವ್ಯವಸ್ಥೆ ಮಾಡಿದೆ.ವಿವಿಧ ರಾಜ್ಯಗಳಿಗೆ ಶ್ರಮಿಕ್​ ರೈಲು ಸಂಚಾರ ಮಾಡುತ್ತಿದ್ದು, ಆಯಾ ರಾಜ್ಯಗಳ ಕಾರ್ಮಿಕರು ಅದರಲ್ಲಿ ತಮ್ಮ ಊರಿಗೆ ತೆರಳುತ್ತಿದ್ದಾರೆ.
ಇದನ್ನೂ ಓದಿ:‘ಕ್ವಾರಂಟೈನ್​ ಮುಗಿದ್ರೂ ನಮ್ಮನ್ನು ಕರ್ನಾಟಕಕ್ಕೆ ಕಳಿಸ್ತಿಲ್ಲ, ಹೊರಗೆ ಹೋದ್ರೆ ಲಾಠಿ ಎತ್ತುತ್ತಾರೆ’
ಆದರೆ ಇದಕ್ಕೂ ಸಹ ಪಶ್ಚಿಮ ಬಂಗಾಳ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಹಿಂದೆ ಕೊವಿಡ್​-19 ಪರಿಸ್ಥಿತಿ ಪರಿಶೀಲನೆಗೆ ಬಂದಿದ್ದ ಕೇಂದ್ರ ತಜ್ಞರ ತಂಡ ರಾಜ್ಯ ಪ್ರವೇಶಿಸಲು ಅಡ್ಡಿ ಮಾಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಕಾರ್ಮಿಕರ ರೈಲು ಪ್ರವೇಶಿಸುವುದಕ್ಕೂ ಅಡ್ಡಿ ಮಾಡುತ್ತಿದ್ದಾರೆ.ಇದರಿಂದಾಗಿ ತೀವ್ರ ಅಸಮಾಧಾನಗೊಂಡಿರುವ ಗೃಹ ಸಚಿವ ಅಮಿತ್​ ಷಾ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ.
ಬೇರೆ ರಾಜ್ಯಗಳಿಗೆ ವಲಸೆ ತೆರಳಿದ್ದ ಕಾರ್ಮಿಕರು ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ತಮ್ಮ ಊರುಗಳಿಗೆ ಹೋಗಲು ಉತ್ಸುಕರಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಆ ರೈಲುಗಳ ಪ್ರವೇಶಕ್ಕೆ ಅಡ್ಡಿ ಮಾಡುತ್ತಿದೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದರೂ, ಪಶ್ಚಿಮ ಬಂಗಾಳದಿಂದ ನಿರೀಕ್ಷಿತ ಬೆಂಬಲ ಸಿಗುತ್ತಿಲ್ಲ ಎಂದು ಅಮಿತ್​ ಷಾ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದಾಗಿ ವಲಸೆ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಮತ್ತಷ್ಟು ಕಷ್ಟಗಳಿಗೆ ಕಾರಣವಾಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ:ಸಿಗರೇಟ್ ವ್ಯಾಪಾರಕ್ಕೆ ಅವಕಾಶದ ಆಮಿಷ: ಸಿಸಿಬಿ ಎಸಿಪಿಗೆ 62 ಲಕ್ಷ ರೂ. ಲಂಚ
ಅಷ್ಟೇ ಅಲ್ಲ, ಪಶ್ಚಿಮ ಬಂಗಾಳದಲ್ಲಿ ಲಾಕ್​ಡೌನ್​ ನಿಯಮಗಳು ಉಲ್ಲಂಘನೆಯಾಗುತ್ತಿರುವ ಬಗ್ಗೆಯೂ ಅಮಿತ್​ ಷಾ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಟೋ ರಿಕ್ಷಾಗಳು ಸಂಚರಿಸುತ್ತಿವೆ. ಮಕ್ಕಳು ಕ್ರಿಕೆಟ್ ಆಡುತ್ತಿದ್ದಾರೆ. ಜನರು ನದಿಯಲ್ಲಿ ಸ್ನಾನ ಮಾಡುತ್ತಿದ್ದಾರೆ. ಈ ಮೂಲಕ ನಿಮ್ಮ ರಾಜ್ಯದಲ್ಲಿ ಲಾಕ್​ಡೌನ್​ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೋಲ್ಕತ್ತ, ಹೌರಾಹ್​ನಂತರ ಕೆಲವು ಕೊವಿಡ್​-19 ಕಂಟೇನ್​ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಪರಿಣಾಮಕಾರಿಯಾಗಿ ಜರುಗಿಸುತ್ತಿಲ್ಲ. ಪೊಲೀಸ್​, ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮುಂದುವರಿದಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತರಾಟೆಗೆ ತೆಗೆದುಕೊಂಡಿತ್ತು. (ಏಜೆನ್ಸೀಸ್​)
ಬಿಎಸ್​ವೈ ಎರಡನೇ ಪ್ಯಾಕೇಜ್? ನೆರವು ವಂಚಿತ 10 ಲಕ್ಷ ಫಲಾನುಭವಿಗಳತ್ತ ಸರ್ಕಾರ ಚಿತ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 1 =
Remember me
