ಪಾಟನಾ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಸ್ವಲ್ಪ ಹೊತ್ತಿನಲ್ಲೇ ನಿಯಂತ್ರಣ ಕಳೆದುಕೊಂಡಿದೆ. ಸೋಮವಾರ ಬಿಹಾರದ ಬೇಗುಸರಾಯ್‌ನಿಂದ ಟೇಕಾಫ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಪೈಲಟ್‌ ರ ಸಮಯೋಚಿತ ತೀರ್ಮಾನದಿಂದ ಭಾರೀ ಅನಾಹುತ ತಪ್ಪಿದೆ. ಅಮಿತ್ ಶಾ ಬಿಹಾರದಲ್ಲಿ ಚುನಾವಣಾ ಪ್ರಚಾರ ಸಭೆಗೆ ಬಂದಿದ್ದರು.
ಇದನ್ನೂ ಓದಿ:ಬ್ಯಾಂಕಿಂಗ್ ಷೇರುಗಳ ಬಿರುಗಾಳಿ: ಷೇರು ಮಾರುಕಟ್ಟೆಯಲ್ಲಿ ಅಬ್ಬರಿಸಿದ ಗೂಳಿ
ಘಟನೆಯ ವಿಡಿಯೋ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿರುವುದನ್ನು ವೀಡಿಯೂ ತೋರಿಸುತ್ತದೆ. ಬಲಕ್ಕೆ ತಿರುಗುತ್ತದೆ ಮತ್ತು ಬಹುತೇಕ ನೆಲವನ್ನು ಸ್ಪರ್ಶಿಸುತ್ತದೆ. ಆದರೆ ಸ್ವಲ್ಪಹೊತ್ತಿನಲ್ಲೇ ಪೈಲಟ್ ನಿಯಂತ್ರಣವನ್ನು ಮರಳಿ ಪಡೆಯುತ್ತಾನೆ.
ಬಿಹಾರದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಎನ್‌ಡಿಎಗೆ ಮರಳಿದ ನಿತೀಶ್ ಕುಮಾ‌ರ್ ಅವರ ಜೆಡಿಯು ಎಲ್ಲಾ 16 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇತರ ಮಿತ್ರಪಕ್ಷಗಳಾದ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ ಮತ್ತು ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ ಕ್ರಮವಾಗಿ 5 ಮತ್ತು 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಇದುವರೆಗೆ ರಾಜ್ಯದ ಒಂಬತ್ತು ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ.
ಐರನ್​ಲೆಗ್ ಎಂದು ಕೆಣಕಿದವರಿಗೆ ಉತ್ತರ ಕೊಡಲು ಮುಂದಾದ ಪೂಜಾ ಹೆಗ್ಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
