ನವದೆಹಲಿ:ಶನಿವಾರದಂದು ಚತ್ತೀಸ್​ಗಢದ ಬಿಜಾಪುರ ಜಿಲ್ಲೆಯ ಸಿಲಗುರ್ ಅರಣ್ಯ ವಲಯದಲ್ಲಿ 22 ಯೋಧರು ನಕ್ಸಲರ ದಾಳಿಗೆ ಬಲಿಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ನಕ್ಸಲರ ವಿರುದ್ಧ ದೊಡ್ಡ ರೀತಿಯಲ್ಲಿ ಸೇಡು ತೀರಿಸಿಕೊಳ್ಳಲು ಸಂಚು ಹಾಕಲು ಆರಂಭಿಸಿದ್ದಾರೆಂದು ಹೇಳಲಾಗಿದೆ. ಅಸ್ಸಾಂ ಪ್ರವಾಸದಲ್ಲಿದ್ದ ಅವರು ಎಲ್ಲ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ದೆಹಲಿಗೆ ವಾಪಾಸಾಗಿದ್ದು, ಮುಂದಿನ ಕ್ರಮದ ಬಗ್ಗೆ ಸಿಆರ್​ಪಿಎಫ್​ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಅಸ್ಸಾಂನಲ್ಲಿ ಚುನಾವಣೆ ಇರುವ ಪ್ರಯುಕ್ತ ಅಮಿತ್​ ಷಾ ಅವರು ಅಲ್ಲಿ ಚುನಾವಣಾ ಪ್ರಚಾರದಲ್ಲಿದ್ದರು. ಆದರೆ ಶನಿವಾರ ನಡೆದ ದಾಳಿ ವಿಚಾರ ತಿಳಿಯುತ್ತಿದ್ದಂತೆ ಎಲ್ಲ ಕೆಲಸಗಳನ್ನು ಮೊಟಕುಗೊಳಿಸಿ ರಾಷ್ಟ್ರ ರಾಜಧಾನಿಗೆ ಮರಳಿದ್ದಾರೆ. ಇಲ್ಲಿ ಸಿಆರ್​ಪಿಎಫ್​ನ ಹಿರಿಯ ಅಧಿಕಾರಿಗಳು ಮತ್ತು ಗೃಹ ಇಲಾಖೆಯ ಕೆಲ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ನಮ್ಮ ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡಲಾಗದು. ನಕ್ಸಲರಿಗೆ ತಕ್ಕ ಪಾಠ ಕಲಿಸಬೇಕು ಎಂದು ಸಭೆಯಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್​ಪಿಫ್​ ಯೋಧರು ಹಾಗೂ ಮಾವೋವಾದಿಗಳ ನಡುವೆ ಭೀಕರ ಗುಂಡಿನ ಕಾಳಗ ನಡೆದಿತ್ತು. ಅದರಲ್ಲಿ 22 ಯೋಧರು ಹುತಾತ್ಮರಾಗಿರುವುದು ಖಚಿತವಾಗಿದೆ. ಇನ್ನೂ 8 ಯೋಧರು ಕಾಣೆಯಾಗಿದ್ದು, ಅವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಭೀಕರ ದಾಳಿಯಲ್ಲಿ 5ಕ್ಕಿಂತ ಹೆಚ್ಚು ಮಾವೋವಾದಿಗಳೂ ಹತರಾಗಿದ್ದಾರೆ. (ಏಜೆನ್ಸೀಸ್​)
#WATCH| Delhi: Home Minister Amit Shah taking top-level meeting with senior officers on Bijapur encounter at his residence.
Home Secretary Ajay Bhalla, Director IB Arvinda Kumar and senior CRPF officers are attending the meeting.pic.twitter.com/3opzROJC7g
— ANI (@ANI)April 4, 2021

ಚತ್ತೀಸ್​ಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ 22 ಯೋಧರು ಹುತಾತ್ಮ!

ಖಾಕಿ ಕಣ್ಣಲ್ಲಿ ತಪ್ಪಿಸಿಕೊಂಡವ ಸಿಸಿ ಕ್ಯಾಮರಾದಲ್ಲಿ ಸಿಕ್ಕಿಬಿದ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 18 =
Remember me
