ಬೆಂಗಳೂರು:ಹದಿನಾರು ತಿಂಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಖುದ್ದು ಸಚಿವರ ಕಾರ್ಯವೈಖರಿ ಪರಿಶೀಲನೆಗೆ ಮುಂದಾಗಿರುವುದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ಜನವರಿಯಲ್ಲಿ ಸರ್ಕಾರಿ ಕಾರ್ಯಕ್ರಮವೊಂದರ ನಿಮಿತ್ತ ಅಮಿತ್ ಷಾ 2 ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಆ ಸಂದರ್ಭದಲ್ಲೇ ಸರ್ಕಾರದ ಕಾರ್ಯವೈಖರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಬಿಜೆಪಿಯ ಉನ್ನತ ಮೂಲಗಳು ಖಚಿತಪಡಿಸಿವೆ. ಷಾ ಅವರ ಬಳಿ ಸರ್ಕಾರದ ಇಂಚಿಂಚೂ ಮಾಹಿತಿ ಇದೆ. ಎರಡು ಖಾಸಗಿ ಸಂಸ್ಥೆಗಳ ಮೂಲಕ ವಾರಕ್ಕೊಮ್ಮೆ ಮಾಹಿತಿ ಪಡೆಯುತ್ತಿರುವ ಅವರಿಗೆ ಪ್ರತಿಸಚಿವರ ಕಾರ್ಯವೈಖರಿಯ ಬಗ್ಗೆ ತಿಳಿದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬುದು ವರಿಷ್ಠರ ಗುರಿಯಾಗಿದೆ.
ಆದ್ದರಿಂದಲೇ ಸರ್ಕಾರದ ಕಾರ್ಯವೈಖರಿ ಅತ್ಯಂತ ಮುಖ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಸರ್ಕಾರ ಇನ್ನಷ್ಟು ಚುರುಕಾಗಬೇಕಾಗಿದೆ, ಕೆಲ ಸಚಿವರು ಸಾರ್ವಜನಿಕರಿಗೆ ಸ್ಪಂದಿಸುವುದರಲ್ಲಿ ಹಿಂದುಳಿದಿದ್ದಾರೆ, ಕೆಲ ಸಚಿವರ ವಿರುದ್ಧ ಆರೋಪಗಳಿವೆ. ಆದ್ದರಿಂದಲೇ ಸರ್ಕಾರಕ್ಕೆ ಚುರುಕು ಮೂಡಿಸುವ ಕೆಲಸವನ್ನು ಷಾ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.
ಅಮಿತ್ ಷಾ ತಮ್ಮ ಹಿಂದಿನ ಕರ್ನಾಟಕ ಭೇಟಿ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎಂಬ ಮಾತನ್ನು ದಾವಣಗೆರೆಯಲ್ಲಿ ಹೇಳಿದ್ದರು. ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದ್ದರಿಂದ ಮತ್ತೊಮ್ಮೆ ಸ್ಪಷ್ಟಪಡಿಸುವ ಕೆಲಸವನ್ನು ಅವರು ಮಾಡಲಿದ್ದಾರೆಂದು ಹೇಳಲಾಗುತ್ತಿದೆ.
ಸರ್ಕಾರದ ಕೆಲಸಗಳು ಜನರ ಕಣ್ಣಿಗೆ ಕಾಣದಿದ್ದರೆ ಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ಅನುಕೂಲವಾಗುವುದಿಲ್ಲ. ಆದ್ದರಿಂದಲೇ ಆ ನಿಟ್ಟಿನಲ್ಲೂ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಸಚಿವರು ಕಾರ್ಯಕರ್ತರ ಕೈಗೆ ಸಿಗುತ್ತಿಲ್ಲ, ವಿಧಾನಸೌಧಕ್ಕೂ ಬರುತ್ತಿಲ್ಲ. ಪ್ರತಿ ಗುರುವಾರ ವಿಧಾನಸೌಧದಲ್ಲಿ ಇರಬೇಕೆಂಬ ಸೂಚನೆಯನ್ನು ಯಾರೊಬ್ಬರೂ ಪಾಲಿಸುತ್ತಿಲ್ಲ. ಈ ಎಲ್ಲ ಅಂಶಗಳು ಚರ್ಚೆಗೆ ಒಳಪಡುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಬಗ್ಗೆ ಸಾಕಷ್ಟು ಚರ್ಚೆ ನಡೆದಿವೆ. ನಾಯಕತ್ವ ಬದಲಾವಣೆಯ ಬಗ್ಗೆಯೂ ಪಕ್ಷದಲ್ಲಿ ಗುಸುಗುಸುಗಳಿವೆ. ಈ ಎಲ್ಲ ಗೊಂದಲ, ಗೋಜಲುಗಳಿಗೆ ಷಾ ಅವರ ರಾಜ್ಯ ಭೇಟಿ ವೇಳೆ ತಿಲಾಂಜಲಿ ಬೀಳುತ್ತದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 2 =
Remember me
