ಕೋಲ್ಕತ: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಯತ್ತ ಮುನ್ನುಗುತ್ತಿದ್ದು, ಪರಿಣಾಮವಾಗಿ ಆ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಕಡಲ ಬಳಿ ವಾಸಿಸುವ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾದಲ್ಲಿಯೂ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿಭಾರತಕ್ಕೆ ಅಮೆರಿಕಾ ದೇಣಿಗೆಯಾಗಿ ನೀಡುತ್ತೆನೆಂದ ವೆಂಟಿಲೇಟರ್​ಗಳಿಗೆ ಹಣ ಪಡೆಯುತ್ತಿದ್ದೆಯೇ?
ಪಶ್ಚಿಮ ಬಂಗಾಳ ಮತ್ತು ಒಡಿಶಾದ ವಿವಿಧೆಡೆ ಎನ್‌ಡಿಆರ್‌ಎಫ್ ನ 41 ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದ್ದು, ಇನ್ನೂ ಕೆಲ ತಂಡಗಳನ್ನು ಸಿದ್ಧವಾಗಿರಿಸಲಾಗಿದೆ. ಸ್ಥಳಾಂತರಿಸಲಾಗುತ್ತಿರುವ ಜನರ ವಸತಿಗಾಗಿ ಹಲವೆಡೆ ಶಿಬಿರಗಳನ್ನು ಪ್ರಾರಂಭಿಸಲಾಗಿದೆ.
2013ರಲ್ಲಿ ಭಾರಿ ಹಾನಿಯುಂಟು ಮಾಡಿದ್ದ ಪೈಲಿನ್ ಚಂಡಮಾರುತದ ಬಳಿಕ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕಡಲ ತೀರಕ್ಕೆ ಅಪ್ಪಳಿಸುತ್ತಿರುವ ಅತಿ ಪ್ರಬಲ ಚಂಡಮಾರುತ ಅಂಫಾನ್ ಎಂದು ತಜ್ಞರು ಹೇಳಿದ್ದಾರೆ.
ಈ ಮಧ್ಯೆ, ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಮುಖ್ಯಮಂತ್ರಿಗಳಿಗೆ ಮಂಗಳವಾರ ಮುಂಜಾನೆ ಕರೆ ಮಾಡಿ ಮಾತನಾಡಿ, ಪರಿಸ್ಥಿತಿ ನಿರ್ವಹಣೆಗೆ ಎಲ್ಲ ರೀತಿಯ ಸಹಾಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್‌ಡಿಆರ್‌ಎಫ್) ಜತೆಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೋಮವಾರವೇ ಪರಿಶೀಲನೆ ನಡೆಸಿದ್ದಾರೆ.
ಮುಂಬೈನಲ್ಲಿ ಮಾಡುತ್ತಿದ್ದದ್ದು ಕೂಲಿ ಕೆಲಸ, ಇಲ್ಲಿ ಬೇಕಂತೆ ಬಾಸುಮತಿ ಅನ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
