ಕೋಲ್ಕತ:ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಯತ್ತ ಮುನ್ನುಗುತ್ತಿದ್ದು, ಬುಧವಾರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಭಾರಿ ಮಳೆ ಪ್ರಾರಂಭವಾಗಿದೆ.
ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಕಡಲ ಬಳಿ ವಾಸಿಸುವ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಅಂಫಾನ್ ಚಂಡಮಾರುತ ಭೀತಿ ಹಿನ್ನೆಲೆ ಬುಧವಾರದಿಂದ ಗುರುವಾರ ಬೆಳಗ್ಗೆವರೆಗೂ ಪಶ್ಚಿಮ ಬಂಗಾಳದಲ್ಲಿ ಯಾವುದೇ ಶ್ರಮಿಕ ವಿಶೇಷ ರೈಲುಗಳ ಓಡಾಟ ನಡೆಸುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾದ ವಿವಿಧೆಡೆ ಎನ್​ಡಿಆರ್​ಎಫ್​ನ 41 ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದ್ದು, ಇನ್ನೂ ಕೆಲ ತಂಡಗಳನ್ನು ಸಿದ್ಧವಾಗಿರಿಸಲಾಗಿದೆ. ಸ್ಥಳಾಂತರಿಸಲಾಗುತ್ತಿರುವ ಜನರ ವಸತಿಗಾಗಿ ಹಲವೆಡೆ ಶಿಬಿರಗಳನ್ನು ಪ್ರಾರಂಭಿಸಲಾಗಿದೆ. 2013ರಲ್ಲಿ ಭಾರಿ ಹಾನಿಯುಂಟು ಮಾಡಿದ್ದ ಪೈಲಿನ್ ಚಂಡಮಾರುತದ ಬಳಿಕ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕಡಲ ತೀರಕ್ಕೆ ಅಪ್ಪಳಿಸುತ್ತಿರುವ ಅತಿ ಪ್ರಬಲ ಚಂಡಮಾರುತ ಅಂಫಾನ್ ಎಂದು ತಜ್ಞರು ಹೇಳಿದ್ದಾರೆ.
ಇದನ್ನೂ ಓದಿ:ತರಕಾರಿ ಮತ್ತು ಹಣ್ಣುಗಳನ್ನು ಸ್ಯಾನಿಟೈಸರ್​ನಲ್ಲಿ ಸ್ವಚ್ಛಗೊಳಿಸಬೇಡಿ
ಒಡಿಶಾದ 6 ಜಿಲ್ಲೆಗಳಿಗೆ ಹಾನಿಯ ಭೀತಿ: ಅಂಫಾನ್ ಚಂಡಮಾರುತ ರಾಜ್ಯದ 6 ಜಿಲ್ಲೆಗಳಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸಲಿವೆ ಎಂದು ಒಡಿಶಾದ ಹವಾಮಾನ ಇಲಾಖೆಯ ಉಪ ನಿರ್ದೇಶಕ ಉಮಾಶಂಕರ್ ದಾಸ್ ಹೇಳಿದ್ದಾರೆ. ಕೇಂದ್ರಪರಾ ಭದ್ರಕ್, ಬಲಾಸೋರ್, ಮಯೂರ್​ಭಂಜ್, ಜಾಜ್​ಪುರ್ ಮತ್ತು ಜಗತ್​ಸಿಂಗಪುರ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎನ್ನಲಾಗಿದೆ.
ಅಮಿತ್ ಷಾರಿಂದ ನೆರವಿನ ಭರವಸೆ:ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಮುಖ್ಯಮಂತ್ರಿಗಳಿಗೆ ಮಂಗಳವಾರ ಮುಂಜಾನೆ ಕರೆ ಮಾಡಿ ಮಾತನಾಡಿ, ಪರಿಸ್ಥಿತಿ ನಿರ್ವಹಣೆಗೆ ಎಲ್ಲ ರೀತಿಯ ಸಹಾಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್​ಡಿಆರ್​ಎಫ್) ಜತೆಗೆ ಮುಂಜಾಗ್ರತ ಕ್ರಮಗಳ ಬಗ್ಗೆ ಸೋಮವಾರವೇ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
