ಆಂಧ್ರಪ್ರದೇಶ:ಶ್ರೀಕಾಕುಳಂ ಜಿಲ್ಲೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗು ಸಾವನ್ನಪ್ಪಿದೆ. ಜಿ.ಸಿಗಡಂ ಮಂಡಲದ ಮೆಟ್ಟವಲಸ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಾತ್ವಿಕಾ ಮೃತ ಮಗು. ಮಗು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳ ದಾಳಿಗೆ ತುತ್ತಾಗಿತ್ತು. ಬೀದಿ ನಾಯಿಗಳು ಮಗುವಿನ ತಲೆ, ಕುತ್ತಿಗೆ ಮತ್ತು ಮುಖಕ್ಕೆ ತೀವ್ರವಾಗಿ ಕಚ್ಚಿವೆ. ಮಕ್ಕಳ ಕಿರುಚಾಟ ಕೇಳಿ ಮಗುವಿನ ಪೋಷಕರು  ಬಂದು ಶ್ವಾನಗಳನ್ನು ಓಡಿಸಿದರು.
ಇದನ್ನೂ ಓದಿ:Karnataka 2nd PUC Results; ಸಮಾನ ಅಂಕ ಗಳಿಸಿದ ಅವಳಿ ವಿದ್ಯಾರ್ಥಿಗಳುಮಗು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ರಾಜಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಉತ್ತಮ ಚಿಕಿತ್ಸೆಗಾಗಿ ಶ್ರೀಕಾಕುಳಂ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ 18 ತಿಂಗಳ ಮಗು ಸಾವನ್ನಪ್ಪಿದೆ. ಕಣ್ಣೆದುರೇ ಬೀದಿ ನಾಯಿಗಳ ದಾಳಿಗೆ ಮಗು ಬಲಿಯಾಗಿರುವ ಕುರಿತಾಗಿ ಪಾಲಕರು ಅಳಲು ತೋಡಿಕೊಂಡಿದ್ದಾರೆ.
ಇತ್ತೀಚಿನದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹಳ್ಳಿ, ಪಟ್ಟಣ, ನಗರಗಳಲ್ಲಿ ನಾಯಿಗಳು ರಸ್ತೆಯಲ್ಲಿ ಓಡಾಡುತ್ತಿವೆ. ಹಸುಳೆಗಳು, ಮುದುಕರು, ಹೆಂಗಸರು ಮಾತ್ರವಲ್ಲದೇ ವಾಹನಗಳಲ್ಲಿ ಹೋಗುವವರನ್ನೂ ಬಿಡದೇ ಶ್ವಾನಗಳು ದಾಳಿ ಮಾಡುತ್ತಿವೆ.
ಅಮ್ಮನ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ…;ನಟಿ ಮೀನಾ ಮಗಳು ನೈನಿಕಾ ಮನವಿ!

pO
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
