ಲಖನೌ:ಗ್ಯಾಂಗ್​ ರೇಪ್​ ಆಗಿದ್ದ ಮಹಿಳೆಯೊಬ್ಬಳು ಪೊಲೀಸ್​ ದೂರು ದಾಖಲಿಸಲು ಬಂದಾಗ ಪೊಲೀಸ್​ ಅಧಿಕಾರಿಯೇ ಆಕೆಯನ್ನು ರೇಪ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜನ್​ಪುರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಲು ಪೊಲೀಸ್​ ಇಲಾಖೆ ಮುಂದಾಗಿದೆ.
ಇದನ್ನೂ ಓದಿ:ಮಮತಾ ಬ್ಯಾನರ್ಜಿ ಇನ್ವಿಟೇಷನ್​ ಡ್ರಾಮಾ! ಕರೆದರೂ ಬಂದಿಲ್ಲ ಎಂದು ಸಾಕ್ಷಿ​ ನೀಡಿದ ಬಿಜೆಪಿ!
35 ವರ್ಷದ ಮಹಿಳೆ ನವೆಂಬರ್​ 30ರಂದು ಕಾಲ್ನಡಿಗೆಯಲ್ಲಿ ಮದನ್ಪುರಕ್ಕೆ ಹೋಗುತ್ತಿದ್ದಾಗ, ಐದು ಪುರುಷರು ಕಾರಿನಲ್ಲಿ ಬಂದು ಆಕೆಯನ್ನು ಅಡ್ಡಗಟ್ಟಿದ್ದಾರೆ. ಕಾರಿನಲ್ಲಿ ಆಕೆಯನ್ನು ಎಳೆದೊಯ್ದು ಹತ್ತಿರದ ಮೈದಾನದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ವಿಚಾರವಾಗಿ ದೂರು ನೀಡಲೆಂದು ಮಹಿಳೆ ಜಲಾಲಾಬಾದ್​ ಪೊಲೀಸ್​ ಠಾಣೆಗೆ ಹೋಗಿದ್ದಳು. ಆಗ ಅಲ್ಲಿದ್ದ ಸಬ್​​ ಇನ್ಸ್‌ಪೆಕ್ಟರ್ ಆಕೆಯನ್ನು ಕೋಣೆಗೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗ ಹಿನ್ನೆಲೆಯಲ್ಲಿ ಮಹಿಳೆ ಎಡಿಜಿ ಅವಿನಾಶ್​ ಚಂದ್ರ ಅವರನ್ನು ಭೇಟಿಯಾಗಿ ದೂರು ದಾಖಲಿಸಿದ್ದಾಳೆ.
ಇದನ್ನೂ ಓದಿ:ದೆಹಲಿ ಜಲ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ ದರೋಡೆ ಮಾಡಿದ ಗೂಂಡಾಗಳು! ಬಿಜೆಪಿಯದ್ದೇ ಕೃತ್ಯ ಎಂದ ಎಎಪಿ
ಈ ಘಟನೆಯ ಬಗ್ಗೆ ತನಿಖೆ ನಡೆಸಲು ಅವಿನಾಶ್​ ಅವರು ಆದೇಶಿಸಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಬ್ರಹ್ಮಪಾಲ್ ಸಿಂಗ್ ಅವರನ್ನು ತನಿಖೆ ನಡೆಸಲು ತಿಳಿಸಲಾಗಿದೆ ಎನ್ನಲಾಗಿದೆ. ಮಹಿಳೆಯ ಆರೋಪ ಸತ್ಯವೆಂದು ಕಂಡುಬಂದಲ್ಲಿ ಎಫ್​ಐಆರ್​ ದಾಖಲಿಸಲಾಗುವುದು ಎಂದು ತಿಳಿಸಲಾಗಿದೆ. (ಪಿಟಿಐ)
ಈ ಕೇಸ್​ ಸಾಲ್ವ್​ ಮಾಡೋಕೆ ಸಹಾಯ ಮಾಡಿದರೆ ನಿಮಗೆ ಸಿಗುತ್ತೆ 2.7 ಕೋಟಿ ರೂಪಾಯಿ!

ಹೋಟೆಲ್​ ರೂಂನ ಬೆಡ್​ಶೀಟ್​ನಲ್ಲಿ ಹೆಂಡತಿಯ ಮೃತದೇಹ ಸುತ್ತಿಟ್ಟು ಪರಾರಿಯಾದ ಗಂಡ! ಬಾಗಿಲು ತೆರೆದ ಸಿಬ್ಬಂದಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 7 =
Remember me
