ಸಿಕಂದರಾಬಾದ್​:ಅಗ್ನಿಪಥ ಯೋಜನೆ ವಿರೋಧಿಸಿ ಸಿಕಂದರಾಬಾದ್​ನಲ್ಲಿ ಉಂಟಾಗಿದ್ದ ಗಲಭೆಯ ಹಿಂದಿನ ಪ್ರಮುಖ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.
ಆವುಲ ಸುಬ್ಬಾ ರಾವ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಈತ ಮಾಜಿ ಸೈನಿಕನಾಗಿದ್ದು, ಅಗ್ನಿಪಥ ಯೋಜನೆ ಖಂಡಿಸಿ ತೆಲಂಗಾಣದ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿಂಸಾಚಾರದ ರೂವಾರಿ ಈತನೇ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದ. ಈ ಎಲ್ಲಾ ಘಟನೆಗೂ ಈತನೇ ಕಾರಣ ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
ವಾಟ್ಸಾಪ್​ ಮೂಲಕ ಮೆಸೇಜ್​ ಕಳುಹಿಸಿ ಹೆಚ್ಚು ಜನರನ್ನು ಸೇರಿಸಿ ಗಲಭೆ ಸೃಷ್ಟಿಸಲು ಈತ ಪ್ರಚೋದನೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಬಂಧಿತ ರಾವ್​ ಆಂದ್ರಪ್ರದೇಶದ ಪ್ರಕಾಶಮ್​ ಜಿಲ್ಲೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ನರಸರಾವ್​ಪೇಟೆ, ಹೈದರಾಬಾದ್​ ಮತ್ತು ಸೇರಿದಂತೆ ಎಳು ಕಡೆ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಶಾಖೆಯನ್ನು ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಅದೊನಿ, ಕರ್ನೂಲ್​, ಗುಂಟೂರ್​, ನೆಲ್ಲೂರು, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯಲ್ಲಿ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + fifteen =
Remember me
