ಮುಂಬೈ:ಮುಖೇಶ್ ಅಂಬಾನಿ ಹಾಗೂ ನೀತು ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿರುವುದು ಗೊತ್ತೇ ಇದೆ. ಈ ಮದುವೆ ಸಮಾರಂಭ ನಡೆಯುತ್ತಿದ್ದ ಸ್ಥಳದಲ್ಲಿ ಬಾಂಬ್​ ಇಟ್ಟಿರುವ ಕುರಿತು ಬೆದರಿಕೆ ಹಾಕಲಾಗಿತ್ತು. ಪೊಲೀಸರು ಕೂಡಲೇ ಸನ್ನದ್ಧರಾಗಿ ಭದ್ರತೆಯನ್ನು ಹೆಚ್ಚಿಸಿದ್ದರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ:ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಪೂಜಾ ಖೇಡ್ಕರ್ ಪೋಷಕರು ನಾಪತ್ತೆ! ಫೋನ್ ಸ್ವಿಚ್​ಆಫ್, ಸ್ಥಳದಿಂದ ಪರಾರಿ
ನಾಳೆ ಅಂಬಾನಿ ಮದುವೆಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಬಳಕೆದಾರರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಇದು ಸುಳ್ಳು ಸುದ್ದಿ ಎಂದು ಗೊತ್ತಿತ್ತು ಆದರೂ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ರುವ ಮದುವೆ ಸುತ್ತಲೂ ಬಿಗಿ ಭದ್ರತೆ ಹೆಚ್ಚಿಸಿದ್ದರು.
ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಜುಲೈ 12 ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ನಡೆಯಿತು. ಈ ಸಮಾರಂಭಕ್ಕೆ ವಿದೇಶಿ ನಟರು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು ಮತ್ತು ರಾಜಕಾರಣಿಗಳು ಸೇರಿ ಬಹುದೊಡ್ಡ ತಾರಾ ಬಣವೇ ಭಾಗವಹಿಸಿದ್ದರು.
ಬಾಂಬ್ ಬಗ್ಗೆ ಮಾಡಿದ್ದ ಪೋಸ್ಟ್‌ನಲ್ಲಿ ಏನಿದೆ?: ಅಂಬಾನಿ ಅವರ ಕುಟುಂಬದ ಮದುವೆಗೆ ಹೋದರೆ ನಾಳೆ ಅರ್ಧದಷ್ಟು ಪ್ರಪಂಚ ತಲೆಕೆಳಗಾಗಿ ಹೋಗುತ್ತದೆ ಎಂದು ನನ್ನ ಮನಸ್ಸು ನಾಚಿಕೆಯಿಲ್ಲದೆ ಆಶ್ಚರ್ಯ ಪಡುತ್ತಿದೆ. ಒಂದು ಪಿನ್ ಕೋಡ್‌ನಲ್ಲಿ ಟ್ರಿಲಿಯನ್‌ಗಟ್ಟಲೆ ಡಾಲರ್‌ಗಳು. ಎಂದು ಪೋಸ್ಟ್ ಮಾಡಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಈ ಪೋಸ್ಟ್ ಹಿಂದಿರುವ ವ್ಯಕ್ತಿಗಾಗಿ ಶೋಧ ನಡೆಸಿದ್ದಾರೆ. ಜೊತೆಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಪ್ರಕರಣ ದಾಖಲಿಸಿಲ್ಲ, ಆದರೆ ಈ ರೀತಿ ಪೋಸ್ಟ್ ಮಾಡಿದ ವ್ಯಕ್ತಿ ಯಾರಿರಬಹುದು ಹಾಗೂ ಆತನ ಪೋಸ್ಟ್ ಹಿಂದಿನ ಉದ್ದೇಶ ಏನಿರಬಹುದು ಎಂಬ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಶ್ರೀಮಂತ ವರನನ್ನು ಬಲೆಗೆ ಬೀಳಿಸಿಕೊಳ್ಳಲು ‘ಪ್ರೇಮ ಪಾಠ’: ಈ ಟೀಚರ್​ ವರಮಾನ 163 ಕೋಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
