ನವದೆಹಲಿ:ಅನಂತ್​ ಅಂಬಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯವರ ಕಿರಿಯ ಮಗ. ಅನಂತ್​ ಅಂಬಾನಿ ಪ್ರಸ್ತುತ ಹಲವಾರು ರಿಲಯನ್ಸ್ ಉದ್ಯಮಗಳ ನಿರ್ದೇಶಕರಾಗಿದ್ದು ಅವರು ಶೀಘ್ರದಲ್ಲೇ ತಮ್ಮ ಗೆಳತಿ ರಾಧಿಕಾ ಮರ್ಚೆಂಟ್ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಅನಂತ್ ಅಂಬಾನಿ ದುಬಾರಿ ವಾಚ್‌ಗಳು ಮತ್ತು ಕಾರುಗಳಲ್ಲಿನ ಅಭಿರುಚಿಗೆ ಹೆಸರುವಾಸಿಯಾಗಿದ್ದಾರೆ. ಆದರೆ ಅವರು ಮುಖೇಶ್ ಅಂಬಾನಿ ಒಡೆತನದ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿದ್ದಾಗ ಅವರು ಪಾಕೆಟ್ ಮನಿಯಾಗಿ ಕೇವಲ 5 ರೂಪಾಯಿಗಳನ್ನು ಪಡೆಯುತ್ತಿದ್ದರು ಎಂಬುದು ಕೆಲವೇ ಜನರಿಗೆ ತಿಳಿದಿದೆ. iDivaಗೆ ನೀಡಿದ್ದ ಹಳೆಯ ಸಂದರ್ಶನದಲ್ಲಿ, ನೀತಾ ಅಂಬಾನಿ ತಮ್ಮ ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ ಮತ್ತು ಅನಂತ್ ಅಂಬಾನಿ ಅವರಿಗೆ ಹಣದ ಮೌಲ್ಯವನ್ನು ಕಲಿಸಲು ಪ್ರತಿ ವಾರ ಕೇವಲ 5 ರೂ. ಮಾತ್ರವೇ ಪಾಕೆಟ್ ಮನಿ ನೀಡುತ್ತಿದ್ದರು ಎಂದು ಬಹಿರಂಗಪಡಿಸಿದರು.
ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಒಮ್ಮೆ ಕ್ಯಾಂಟೀನ್‌ನಲ್ಲಿ ಖರ್ಚು ಮಾಡಲು ಕೇವಲ 5 ರೂಪಾಯಿಗಳನ್ನು ಹೊಂದಿದ್ದನ್ನು ಕಂಡು ಶಾಲೆಯಲ್ಲಿ ಇತರ ಮಕ್ಕಳು ಅಣಕಿಸಿದ್ದರು ಎಂದು ಬಹಿರಂಗಪಡಿಸಿದರು. ಅನಂತ್​ ಅಂಬಾನಿಯ ಸ್ನೇಹಿತರು ಕೂಡ ‘ತೂ ಅಂಬಾನಿ ಹೈ ಯಾ ಭಿಕಾರಿ?’ ಎಂದು ಲೇವಡಿ ಮಾಡಿದ್ದರು ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಮಗನ ಮಾತು ಕೇಳಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ನಗುತ್ತಿದ್ದರು ಎಂದು ಸಂದರ್ಶನದಲ್ಲಿ ತಿಳಿದುಬಂದಿದೆ.
ಭಾರತದ ಶ್ರೀಮಂತ ಕುಟುಂಬದ ಸದಸ್ಯರಾಗಿದ್ದರೂ, ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ತಮ್ಮ ವಿನಮ್ರ ನಡವಳಿಕೆ ಮತ್ತು ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದ್ದಾರೆ. ಅನಂತ್ ಅಂಬಾನಿ ಬ್ರೌನ್ ವಿಶ್ವವಿದ್ಯಾನಿಲಯದಿಂದ ತಮ್ಮ ಅಧ್ಯಯನವನ್ನು ಮುಗಿಸಿದ್ದು ಇದೀಗ ರಿಲಯನ್ಸ್ ನ್ಯೂ ಎನರ್ಜಿ ಬಿಸಿನೆಸ್ಅನ್ನು ನಿರ್ವಹಿಸುತ್ತಿದ್ದಾರೆ. ಅವರು ರಿಲಯನ್ಸ್ 02ಸಿ ಮತ್ತು ರಿಲಯನ್ಸ್ ನ್ಯೂ ಸೋಲಾರ್ ಎನರ್ಜಿಯ ನಿರ್ದೇಶಕರಾಗಿದ್ದಾರೆ. ಅವರ ನಿವ್ವಳ ಆಸ್ತಿ ಮೌಲ್ಯ ಸುಮಾರು 40 ಬಿಲಿಯನ್ ಡಾಲರ್​ ಎನ್ನಲಾಗುತ್ತದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + nine =
Remember me
