ಮುಂಬೈ:ವಿಶ್ವದ ಟಾಪ್​ ಮೋಸ್ಟ್ ಬಿಲೇನಿಯರ್​ಗಳಲ್ಲಿ ಒಬ್ಬರಾದ ಮುಕೇಶ್​-ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಅವರ ಮದುವೆ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್​ ಕನ್ವೆಂಷನ್​ ಸೆಂಟರ್​ನಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ವಿಶ್ವದಾದ್ಯಂತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಿತ್ರರಂಗದ ವ್ಯಕ್ತಿಗಳು ಮತ್ತು ದೇಶದ ಬಹುತೇಕ ಎಲ್ಲಾ ಪ್ರಮುಖರು ಭಾಗಿಯಾಗಿದ್ದರು.
ಈ ಮದುವೆ ಸಮಾರಂಭ ನಡೆಯುತ್ತಿದ್ದ ಸ್ಥಳದಲ್ಲಿ ಬಾಂಬ್​ ಇಟ್ಟಿರುವ ಕುರಿತು ಬೆದರಿಕೆ ಹಾಕಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಂಬ್​ ಬೆದರಿಕೆಯನ್ನು ಹಾಕಿದ ಆರೋಪಿಯನ್ನು ಬಂಧಿಸಿದ್ದು, ಈತನನ್ನು ವಿರಾಲ್​ ಷಾ ಎಂದು ಗುರುತಿಸಲಾಗಿದೆ. ಬಂಧಿತನು ಗುಜರಾತ್​ನ ವಡೋದರಾ ನಿವಾಸಿ ಎಂದು ವರದಿಯಾಗಿದೆ.
STORY | Engineer held from Vadodara for social media post on bomb threat at Anant Ambani's wedding.READ:https://t.co/HqQoB4Xti4VIDEO | “Maharashtra Police initiated the investigation. A special operation group was assisting the Maharastra Police in this,” says Vadodara…pic.twitter.com/YiUSVLxSPx
ಇದನ್ನೂ ಓದಿ:ರೋಹಿತ್​ನ ಕ್ಯಾಪ್ಟನ್​ ಮಾಡಿದ್ದು ನಾನೇ; ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ಟೀಕಾಕಾರರಿಗೆ ಖಡಕ್​ ರಿಪ್ಲೈ ಕೊಟ್ಟ ಸೌರವ್​
ಈ ಕುರಿತು ಪ್ರತಿಕ್ರಿಯಿಸಿರುವ ವಡೋದರಾ ಪೊಲೀಸ್​ ಆಯುಕ್ತ ನರಸಿಂಹ ಕುಮಾರ್, ಬಂಧಿತನ ಹೆಸರು ವಿರಾಲ್​ ಷಾ ಎಂದು ತಿಳಿದು ಬಂದಿದ್ದು, ಈತ ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈತನನ್ನು ವಡೋದರಾದಿಂದ ಪೊಲೀಸರು ಮುಂಬೈಗೆ ಕರೆದೊಯ್ದಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು. ಯಾವ ಕಾರಣಕ್ಕಾಗಿ ಆತ ಬೆದರಿಕೆ ಹಾಕಿದೆ ಎಂಬುದು ತಿಳಿದಿಲ್ಲ. ತನಿಖೆ ಬಳಿಕ ಎಲ್ಲವೂ ತಿಳಿಯಲಿದೆ ಎಂದು ವಡೋದರಾ ಪೊಲೀಸ್​ ಆಯುಕ್ತ ನರಸಿಂಹ ಕುಮಾರ್​ ಮಾಜಿತಿ ನೀಡಿದ್ದಾರೆ.
ಅಂಬಾನಿ ಮದುವೆಯಲ್ಲಿ ಬಾಂಬ್ ಸಿಡಿದ ನಂತರ ನಾಳೆ ಅರ್ಧ ಜಗತ್ತು ತಲೆಕೆಳಗಾಗುತ್ತದೆ ಎಂದು ನನ್ನ ಮನಸ್ಸು ಹೇಳುತ್ತಿದೆ ಎಂದು ವಿರಾಲ್​ ಷಾ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದ. ಈ ಪೋಸ್ಟ್​ನ ನಂತರ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದ ಸುತ್ತ ಭದ್ರತೆಯನ್ನು ಹೆಚ್ಚಿಸಿದ್ದರು ಮತ್ತು ಪ್ರಕರಣ ದಾಖಲಿಸಿಕೊಂಡು ಟ್ವೀಟ್​ ಮಾಡಿದ್ದವನನ್ನು ಹುಡುಕಲು ವಿಶೇಷ ತಂಡ ರಚಿಸಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:10 + 13 =
Remember me
