ಅನಂತಪುರ:ತಂದೆಯೊಬ್ಬ ತನ್ನ ಅವಳಿ ಗಂಡು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ಸಮಾಧಿ ಮಾಡಿರುವ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣ್​ದುರ್ಗ ಮಂಡಲದ ಬೊಯಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಾಧಮ್ಮ ಮತ್ತು ರವಿ ಎಂಬುವರ ಅವಳಿ ಮಕ್ಕಳಾದ​ ಐದು ವರ್ಷದ ಸಂದೀಪ್​ ಮತ್ತು ಸುಧೀರ್ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಮಕ್ಕಳು ಮಲಗಿದ್ದ ವೇಳೆ ತಂದೆಯೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ರಾತ್ರಿ ಶವಗಳನ್ನು ಗ್ರಾಮದ ಪಕ್ಕದ ಅರಣ್ಯ ಪ್ರದೇಶದ ಬಳಿ ಕೊಂಡೊಯ್ದು ಸಮಾಧಿ ಮಾಡಿದ್ದಾನೆ.
ಇದನ್ನೂ ಓದಿ:ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ಧಿಮತ್ತೆ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು
ಮರುದಿನ ಮಕ್ಕಳಿಬ್ಬರು ಕಾಣದಿದ್ದಾಗ ರಾಧಮ್ಮ ತನ್ನ ಪತಿ ರವಿಯನ್ನು ವಿಚಾರಿಸಿದ್ದಾಳೆ. ಬಳಿಕ ಆತ ನಡೆದ ಘಟನೆಯೆಲ್ಲ ತನ್ನ ಪತ್ನಿಯ ಮುಂದೆ ವಿವರಿಸಿದ್ದಾನೆ. ನಂತರ ಗ್ರಾಮಸ್ಥರ ಸಹಾಯದಿಂದ ಮಕ್ಕಳ ಸಮಾಧಿ ಸ್ಥಳಕ್ಕೆ ತಲುಪಿದಾಗ ಮಕ್ಕಳ ಶವ ಪತ್ತೆಯಾಗಿದೆ.
ಇನ್ನು ರವಿ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.(ಏಜೆನ್ಸೀಸ್​)
ಕಾಲುವೆಗೆ ಬಿದ್ದಿದ್ದ ಕಾರು, ಒಂದು ದಿನದ ಬಳಿಕ ಪತ್ತೆ! ಬಾಗಿಲು ತೆರೆದವರಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 12 =
Remember me
