ಹೈದರಾಬಾದ್​:ವಿಧಾನ ಪರಿಷತ್ತನ್ನು ರದ್ದುಗೊಳಿಸುವ ನಿರ್ಣಯವನ್ನು ಆಂಧ್ರ ಪ್ರದೇಶದ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.
ಆಂಧ್ರ ಸರ್ಕಾರದ ಮೂರು ರಾಜಧಾನಿ ಮಸೂದೆಯನ್ನು ತಮ್ಮ ವಿವೇಚಾನಾಧಿಕಾರ ಬಳಸಿ ವಿಧಾನ ಪರಿಷತ್ತಿನ​ ಮುಖ್ಯಸ್ಥರು ಆಯ್ಕೆ ಸಮಿತಿಗೆ ಶಿಫಾರಸ್ಸು ಮಾಡಿದ್ದರು. ಇದರ ಬೆನ್ನಲ್ಲೇ ಆಂಧ್ರ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ವಿಧಾನ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ನಡೆದ ಚರ್ಚೆಯ ಮೇಲೆ ಗುರುವಾರ ಆಂಧ್ರದ ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಈ ವೇಳೆ ಸಿಎಂ ಜಗನ್​ ಮೋಹನ್​ ರೆಡ್ಡಿ ಅವರು ಸ್ಪೀಕರ್​ ಬಳಿ ವಿಧಾನ ಪರಿಷತ್ತನ್ನು ಉಳಿಸಿಕೊಳ್ಳಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚಿಸಲು ಸೋಮವಾರ ಅವಕಾಶ ಕೇಳಿದ್ದರು.
ಇದೀಗ ವಿಧಾನ ಪರಿಷತ್ತನ್ನು ತೆಗೆದು ಹಾಕಲು ಸಂಪುಟ ಅನುಮೋದನೆ ನೀಡಿದೆ ಎಂದು ವೈಎಸ್​ಆರ್​ಸಿಪಿಯ ಶಾಸಕ ಗುಡಿವಡ ಅಮರನಾಥ್​ ತಿಳಿಸಿದ್ದಾರೆ. ಸರ್ಕಾರದ ನಿರ್ಣಯ ಬಗ್ಗೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಮಾತನಾಡಿರುವ ತೆಲುಗು ದೇಶಂ ಪಕ್ಷದ(ಟಿಡಿಪಿ) ಸಂಸದ ಕನಕಮೇದಾಳ ರವೀಂದ್ರ ಕುಮಾರ್​, ಸಂವಿಧಾನದ ಮೌಲ್ಯಗಳನ್ನು ಆಂಧ್ರ ಸರ್ಕಾರ ಹಿಂಬಾಲಿಸುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ದುರಾದೃಷ್ಟವಶಾತ್ ದೋಷಯಕ್ತ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದಿದ್ದಾರೆ.​
ವಿಧಾನ ಪರಿಷತ್ತನ್ನು ಬೇರೆ ಕಾರಣಗಳಿಗೆ ತೆಗೆದುಹಾಕಬಹುದು. ಆದರೆ, ಮೂರು ರಾಜಧಾನಿ ಮಸೂದೆಯನ್ನು ಆಯ್ಕೆ ಸಮಿತಿಗೆ ಕಳಹಿಸಿದ್ದಕ್ಕೆ ಪರಿಷತ್ತನ್ನು ತೆಗೆದುಹಾಕುವ ನಿರ್ಧಾರ ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.(ಏಜೆನ್ಸೀಸ್​)
ಆಂಧ್ರಪ್ರದೇಶ ವಿಧಾನಪರಿಷತ್ ರದ್ದು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
