ಅಮರಾವತಿ:ಅಮರಾವತಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ತೆಲಗು ದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ಇಂದು ಬೆಳಿಗ್ಗೆ ನೋಟಿಸ್ ಜಾರಿಗೊಳಿಸಿದೆ.
ಆಂಧ್ರಪ್ರದೇಶದ ಹೊಸ ರಾಜಧಾನಿಯಾಗುತ್ತಿರುವ ಅಮರಾವತಿಯಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಆಗಿದ್ದ ವೇಳೆ ಅಪಾರ ಪ್ರಮಾಣದ ಭೂ ಹಗರಣ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಜಗನಮೋಹನ್ ರೆಡ್ಡಿ ಅವರು ಪ್ರಕರಣದ ತನಿಖೆಯನ್ನು ಇತ್ತೀಚೆಗೆ ಸಿಐಡಿ ಗೆ ವಹಿಸಿದ್ದರು.
ಇದನ್ನೂ ಓದಿ:ಸದನದಲ್ಲಿ ಸದ್ದು ಮಾಡುತ್ತಿದೆ ಸಿಡಿ- ಕೋರ್ಟ್‌ಗೆ ಹೋಗಿದ್ದಕ್ಕೆ ಕೊಡಲಾಗ್ತಿದೆ ಸಮರ್ಥನೆ
ಸಿಐಡಿ ನೋಟಿಸ್ ಪ್ರಕಾರ ನಾಯ್ಡು ಅವರು ಖುದ್ದು ವಿಚಾರಣೆಗೆ ಹಾಜರಾಗಬೇಕಿದೆ. ಅಲ್ಲದೇ ಅವರ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ನಾಯ್ಡು ಮೇಲೆ ಸಿಐಡಿ 120b, 166,167, and 217 ಅಡಿ ಪ್ರಕರಣ ದಾಖಲಿಸಿದೆ. ಅಲ್ಲದೇ ಅವರಿಗೆ ಬಂಧನದ ಭೀತಿಯೂ ಕಾಡುತ್ತಿದೆ.
ಸಿಐಡಿ ನೋಟಿಸ್ ಜಾರಿಗೊಳಿಸಿರುವ ಸಂಗತಿ ಆಂಧ್ರಪ್ರದೇಶದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ. ಸಿಎಂ ಜಗನಮೋಹನ್ ರೆಡ್ಡಿ ಹಗೆತನ ಸಾಧಿಸುತ್ತಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ. ನಾಯ್ಡು ಅವರಿಗೆ ಸಿಐಡಿ ನೋಟಿಸ್ ನೀಡಿರುವ ಸಂಗತಿ ಟ್ವಿಟ್ಟರ್​ನಲ್ಲಿ ಟ್ರಂಡಿಂಗ್ ಆಗಿದ್ದು, ಟಿಡಿಪಿ ಹಾಗೂ ವೈಎಸ್​ಆರ್​ ಕಾಂಗ್ರೆಸ್ ಕಾರ್ಯಕರ್ತರು ಪರ ವಿರೋಧದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಕಾಮಗಾರಿ ಆರಂಭ

ಬ್ಯಾಂಕ್​ ಮುಷ್ಕರ: ಕೇಂದ್ರ ಸರ್ಕಾರಕ್ಕೆ ಸಾರ್ವಜನಿಕ ವಲಯದ ಬ್ಯಾಂಕುಗಳು ಕೊಟ್ಟ ಎಚ್ಚರಿಕೆ ಎಂತದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 1 =
Remember me
