ವಿಶಾಖಪಟ್ಟಣಂ:ಉತ್ತರ ಪ್ರದೇಶ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರವೂ ಕೂಡ ಕರೊನಾ ವೈರಸ್​ ಲಾಕ್​ಡೌನ್​ನಿಂದ ನಲುಗಿಹೋಗಿರುವ ಬಡ ಜನತೆಯ ಬೆನ್ನಿಗೆ ನಿಂತಿದೆ.
ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ವೈ.ಎಸ್​. ಜಗನ್​ ಮೋಹನ್​ ರೆಡ್ಡಿ, ಬಡವರಿಗೆ ಉಚಿತ ರೇಷನ್​ ಮತ್ತು ಒಂದು ಕುಟಂಬಕ್ಕೆ 1000 ರೂ. ಅನ್ನು ಕರೊನಾ ವೈರಸ್​ನಿಂದ ಉಂಟಾಗಿರುವ ಲಾಕ್​ಡೌನ್​ ತೆರವು ಆಗುವವರೆಗೂ ನೀಡುವುದಾಗಿ ಘೋಷಿಸಿದ್ದಾರೆ.
ಆಂಧ್ರದಲ್ಲೂ ಕೂಡ ಅಂತಾರಾಜ್ಯ ಸಾರಿಗೆ ವ್ಯವಸ್ಥೆಯನ್ನು ಮಾರ್ಚ್​ 31ರವರೆಗೆ ನಿರ್ಬಂಧಿಸಲಾಗಿದೆ. ಅಲ್ಲದೆ, ಮನೆಯಿಂದ ಯಾರೂ ಹೊರಬರಬೇಡಿ, ಅಗತ್ಯವಿದ್ದಲ್ಲಿ ಮಾತ್ರ ಹೊರಬನ್ನಿ ಎಂದು ಜನತೆಯಲ್ಲಿ ಜಗನ್​ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರಿ ನೌಕರರನ್ನು ರೊಟೇಶನ್​ ಆಧಾರದ ಮೇಲೆ ಕೆಲಸ ಮಾಡಲು ಅವಕಾಶ ನೀಡಲಾಗಿದೆ.
ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ಈವರೆಗೂ ರಾಜ್ಯದಲ್ಲಿ ಆರು ಸೋಂಕಿತ ಪ್ರಕರಣಗಳು ಮಾತ್ರ ವರದಿಯಾಗಿವೆ. ಅದರಲ್ಲಿ ಓರ್ವ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಕರೊನಾ ಭೀತಿ: ಸಂಕಷ್ಟದಲ್ಲಿರೋ ದಿನಗೂಲಿ ನೌಕರರಿಗೆ ಪ್ರತಿದಿನ 1000 ರೂ. ನೀಡುವುದಾಗಿ ಸಿಎಂ ಯೋಗಿ ಘೋಷಣೆ

PHOTOS| ಕರೊನಾ ಸೋಂಕು ತಗುಲದಂತೆ ಏನು ಮಾಡಬೇಕು? ಮಾಡಬಾರದು?: ಉಪಯುಕ್ತ ಮಾಹಿತಿ ಫೋಟೋಗಳಲ್ಲಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − thirteen =
Remember me
