ವಿಜಯವಾಡ:ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಸ್ಕಿಲ್​ ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಆಂಧ್ರದ ಹೈಕೋರ್ಟ್​ ಸೂಚನೆ ಮೇರೆಗೆ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು, ಆಂಧ್ರದ ನಂದ್ಯಾಲದಲ್ಲಿ ಶನಿವಾರ ಮುಂಜಾನೆ ಬಂಧನ ಮಾಡಿದ್ದಾರೆ.
ಸ್ಕಿಲ್ ಡೆವಲಪ್​ಮೆಂಟ್ ಕಾರ್ಪೊರೇಷನ್​​​ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರು ಎ1 ಆರೋಪಿಯಾಗಿದ್ದಾರೆ. ಅವರ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸ್ಕಿಲ್​ ಡೆವಲಪ್​ಮೆಂಟ್​ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. 58 ಕೋಟಿ ರೂ. ಯೋಜನಾ ವೆಚ್ಚವನ್ನು ದಿಢೀರನೇ 370 ಕೋಟಿ ರೂ.ಗೆ ಏರಿಸಿರುವ ಆರೋಪ ಕೇಳಿಬಂದಿದೆ.
ಇಂದು ಬೆಳಗ್ಗೆ ನಂದ್ಯಾಲ ವಲಯದ ಡಿಐಜಿ ರಘುರಾಮಿ ರೆಡ್ಡಿ ನೇತೃತ್ವದ ಪೊಲೀಸ್​ ತಂಡ ಬೆಳಗ್ಗೆ 3 ಗಂಟೆ ಸುಮಾರಿಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧನ ಮಾಡಿದೆ. ಆರಂಭದಲ್ಲಿ ಭಾರೀ ವಿರೋಧ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡ ಪೊಲೀಸರು ವಿಜಯವಾಡಗೆ ತೆರಳಿದರು.(ಏಜೆನ್ಸೀಸ್​)
ಬದಲಿ ಆಟಗಾರನಾಗಿ ಆಸೀಸ್​ ಗೆಲುವಿನ ರೂವಾರಿಯಾದ ಲಬುಶೇನ್​

ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣ ಮರು ತನಿಖೆ ಅರ್ಜಿ ವಜಾ

ರಾಜಕೀಯಕ್ಕೆ ಸಮಂತಾ? ಕುತೂಹಲ ಮೂಡಿಸಿದೆ ದಕ್ಷಿಣ ಭಾರತದ ಟಾಪ್​ ನಟಿಯ ನಡೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × two =
Remember me
