ಅಮರಾವತಿ (ಆಂಧ್ರ ಪ್ರದೇಶ):ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಚಿನ್ನವಂಗ್ಲಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ದೆಹಲಿ ಕೋಚಿಂಗ್ ಸೆಂಟರ್ ದುರಂತ: ಸಿಬಿಐ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ
ಗುರುವಾರ ತಡರಾತ್ರಿ ಮನೆಯ ಮಣ್ಣಿನ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಗುರು ಶೇಖರ ರೆಡ್ಡಿ (42), ಪತ್ನಿ ದಸ್ತಗಿರಮ್ಮ ಮತ್ತು ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಲ್ಲಗಡ್ಡ ಉಪವಿಭಾಗದ ಪೊಲೀಸ್ ಅಧಿಕಾರಿ ಶೇಕ್ ಷರೀಫುದ್ದೀನ್ ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಈ ಘಟನೆ ನಡೆದಿದೆ. ಮಧ್ಯರಾತ್ರಿ ಚಾವಣಿ ಕುಸಿದ ಪರಿಣಾಮ ಭಾರೀ ಸದ್ದು ಕೇಳಿದ ಮನೆಯ ಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ನೋಡಿದ್ದಾರೆ. ಅಷ್ಟೊತ್ತಿಗಾಗಲೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತುಮಕೂರು: ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eighteen =
Remember me
