ವಿಜಯವಾಡ:ಆನ್​ಲೈನ್​ ಟ್ರೋಲ್​ಗಳಿಂದ ಬೇಸತ್ತು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಪರವಾಗಿ ಮಾತನಾಡಿದ್ದಕ್ಕೆ ವಿಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷದ ಕಾರ್ಯಕರ್ತರ ಆನ್​ಲೈನ್​ ಟ್ರೋಲ್​ಗಳ ಕಿರುಕುಳಕ್ಕೆ ಒಳಗಾಗಿ ಮಹಿಳೆ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಆಕೆಯ ಕುಟುಂಬ ಆರೋಪ ಮಾಡಿದೆ.
ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಗೀತಾಂಜಲಿಯನ್ನು ಗುಂಟೂರಿನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗೀತಾಂಜಲಿ ಅವರು ಆಂಧ್ರ ಸರ್ಕಾರ ಆಯೋಜನೆ ಮಾಡಿದ್ದ ಜಮೀನು ಪಟ್ಟ ಪಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಸ್ಥಳೀಯ ಮಾಧ್ಯಮಗಳಿಗೆ ಸಂದರ್ಶನ ನೀಡಿದರು. ಬಳಿಕ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ವೈರಲ್ ಆದ ನಂತರ ಗೀತಾಂಜಲಿಯನ್ನು ತುಂಬಾ ಕೆಟ್ಟದಾಗಿ ಟ್ರೋಲ್ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಗುಂಟೂರು ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದುಡಿ ತಿಳಿಸಿದ್ದಾರೆ.
20 ಲಕ್ಷ ರೂಪಾಯಿ ಪರಿಹಾರಗೀತಾಂಜಲಿ ಸಾವಿಗೆ ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಕೂಡಲೇ ಗೀತಾಂಜಲಿ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಹಣವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ. ಅಲ್ಲದೆ, ಆಕೆಯ ವಿರುದ್ಧ ಟ್ರೋಲ್​ ಮಾಡಿದ ಸಾಮಾಜಿಕ ಜಾಲತಾಣ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಆಕೆಯ ಯೂಟ್ಯೂಬ್​ ಸಂದರ್ಶನದಲ್ಲಿ ಬಹಳ ಕೆಟ್ಟದಾಗಿ ಕಾಮೆಂಟ್​ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಹೇಳಲಾಗಿದೆ. ಅಲ್ಲದೆ, ಆಡಳಿತಾರೂಢ ವೈಎಸ್​​ಆರ್​ಸಿಪಿ ಕಾರ್ಯಕರ್ತರು ಗೀತಾಂಜಲಿ ಸಾವಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಗೀತಾಂಜಲಿ ರೈಲಿಗೆ ಸಿಲುಕಿದ ಸ್ಥಳದಿಂದ ಸೆರೆಹಿಡಿಯಲಾಗಿದೆ ಎನ್ನಲಾದ ವಿಡಿಯೋವನ್ನು ಟಿಡಿಪಿ ಬಿಡುಗಡೆ ಮಾಡಿದೆ. ಗೀತಾಂಜಲಿಯನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕೊಂದಿದ್ದಾರೆ ಎಂದು ಟಿಡಿಪಿ ಆರೋಪ ಮಾಡಿದೆ. ಗೀತಾಂಜಲಿ ರೈಲಿನೊಳಗೆ ನೆಲದ ಮೇಲೆ ಮಲಗಿರುವುದನ್ನು ಕಾಣಬಹುದು. ಜನರು ಅವಳನ್ನು ಪರೀಕ್ಷಿಸುತ್ತಿದ್ದಾರೆ. ವಿಡಿಯೋದಲ್ಲಿ ಕೇಳಿದ ಸಂಭಾಷಣೆಯ ಆಧಾರದ ಮೇಲೆ, ಇಬ್ಬರು ಅಪರಿಚಿತ ವ್ಯಕ್ತಿಗಳು ಗೀತಾಂಜಲಿಯನ್ನು ಓಡುತ್ತಿರುವ ರೈಲಿಗೆ ತಳ್ಳಿ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ ಎಂದು ಟಿಡಿಪಿ ಹೇಳಿದೆ.
ಸದ್ಯ ಗೀತಾಂಜಲಿ ಪ್ರಕರಣ ಆಂಧ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲೂ ಪರ-ವಿರೋಧ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ನಡುವೆ ಪೊಲೀಸರು ತಮ್ಮ ತನಿಖೆಯನ್ನು ಆರಂಭಿಸಿದ್ದಾರೆ.(ಏಜೆನ್ಸೀಸ್​)
ಮಗಳಿಂದಲೇ ಬಯಲಾಯ್ತು ನಟಿ ಲಕ್ಷ್ಮೀಗಿದ್ದ ಅಫೇರ್! ದಾಂಪತ್ಯ ದ್ರೋಹದ ಗುಟ್ಟು ಬಿಚ್ಚಿಟ್ಟ ಮಾಜಿ ಗಂಡ

ಶೂಟಿಂಗ್​ ವೇಳೆ ಹಾವು ಕಚ್ಚಿ ಒಬ್ಬ ಸತ್ತೇ ಹೋದ; ದೇವಿ ಚಿತ್ರದ ಶಾಕಿಂಗ್ ಸಂಗತಿ ಬಿಚ್ಚಿಟ್ಟ ಪ್ರೇಮಾ

ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು: ನಟ ಶಿವರಾಜ್ ಕುಮಾರ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
