ಅಮರಾವತಿ:ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್ ಜಗನ್​​ ಮೋಹನ್​​ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಜಗನ್ ಜತೆಗೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.
ಇದನ್ನು ಓದಿ:ಜಾಮೀನು ದೊರೆತರು ಸಿಎಂ ಕೇಜ್ರಿವಾಲ್​ಗಿಲ್ಲ ಬಿಡುಗಡೆ ಭಾಗ್ಯ; ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್​
ಆಡಳಿತ ಪಕ್ಷದ ಉಂಡಿ ಶಾಸಕ ಕೆ.ರಘುರಾಮ ಕೃಷ್ಣರಾಜು ಅವರು ನೀಡಿರುವ ದೂರಿನ ಮೇರೆಗೆ ಜಗನ್ ಮೋಹನ್ ರೆಡ್ಡಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಪಿ.ವಿ.ಸುನೀಲ್ ಕುಮಾರ್ ಮತ್ತು ಪಿಎಸ್ಆರ್ ಸೀತಾರಾಮಾಂಜನೇಯುಲು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಗುಂಟೂರು ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಜಿ.ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಶಾಸಕ ಕೆ.ರಘುರಾಮ ಕೃಷ್ಣರಾಜು ಅವರು ತಮ್ಮ ದೂರಿನಲ್ಲಿ, ಹೈದರಾಬಾದ್‌ನಲ್ಲಿ 2021ರಲ್ಲಿ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು ಹೇಳಿದ್ದಾರೆ. ಬಂಧನದ ನಂತರ ಹೈದರಾಬಾದ್‌ನ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿಲ್ಲ ಮತ್ತು ಟ್ರಾನ್ಸಿಟ್ ಅರೆಸ್ಟ್ ವಾರಂಟ್ ಪಡೆಯಲಿಲ್ಲ. ಸಿಐಡಿ ಕಚೇರಿಗೆ ವರ್ಗಾಹಿಸಿದರು. ಪಿವಿ ಸುನೀಲ್ ಕುಮಾರ್​​, ಪಿಎಸ್ಆರ್ ಆಂಜನೇಯುಲು ಜತೆಗೆ ಹಲವು ಪೊಲೀಸ್ ಅಧಿಕಾರಿಗಳು ಸಿಐಡಿ ಕಚೇರಿಗೆ ಬಂದು ರಬ್ಬರ್ ಬೆಲ್ಟ್ ಮತ್ತು ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ನನ್ನ ಫೋನ್ ಕಸಿದುಕೊಂಡು ಪಾಸ್‌ವರ್ಡ್ ಹೇಳುವವರೆಗೂ ಥಳಿಸಿದ್ದಾರೆ ಎಂದಿದ್ದಾರೆ.
ಅಲ್ಲದೆ, ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ತಿಳಿದಿದ್ದರು, ಆಗಿನ ರಾಜ್ಯದ ಸಿಎಂ ಜಗನ್ ಮೋಹನ್ ರೆಡ್ಡಿ (ವೈಎಸ್ ಜಗನ್ ಮೋಹನ್ ರೆಡ್ಡಿ) ಅವರ ಒತ್ತಡದಿಂದಾಗಿ ಅವರ ಹೃದ್ರೋಗಕ್ಕೆ ಸಂಬಂಧಿಸಿದಂತೆ ಔಷಧಿಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಲಿಲ್ಲ. ಮತ್ತು ನನ್ನ ಎದೆಯ ಮೇಲೆ ಕುಳಿತುಕೊಂಡು ಭಾರ ಹಾಕುವ ಮೂಲಕ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು, ಡಾ.ಪ್ರಭಾವತಿ ಪೊಲೀಸ್ ಅಧಿಕಾರಿಗಳ ಒತ್ತಾಯಕ್ಕೆ ಮಣಿದು ಸುಳ್ಳು ವೈದ್ಯಕೀಯ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಗುಂಟೂರು ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ, 166, 167, 197, 307, 326, 465 ಮತ್ತು 506 ಜತೆಗೆ ಸೆಕ್ಷನ್ 34ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಅಂದಿನ ಐಪಿಎಸ್ ಅಧಿಕಾರಿ ಸುನೀಲ್ ಕುಮಾರ್ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂಕೋರ್ಟ್​​​ನಲ್ಲಿ ಆ ಪ್ರಕರಣ ಮೂರು ವರ್ಷಗಳಿಂದ ನಡೆಯುತ್ತಿದ್ದು, ವಾಸ್ತವವಾಗಿ ಸುಪ್ರೀಂಕೋರ್ಟ್ ತಿರಸ್ಕರಿಸಿದ ಪ್ರಕರಣದಲ್ಲಿ ಹೊಸ ಎಫ್​​ಐಆರ್ ದಾಖಲಿಸುವುದನ್ನು ನಿಮ್ಮ ವಿವೇಚನೆಗೆ ಬಿಡುತ್ತೇನೆ ಎಂದಿದ್ದಾರೆ.(ಏಜೆನ್ಸೀಸ್​​)
ಶಂಭು ಗಡಿ ಸಂಚಾರಮುಕ್ತಗೊಳಿಸಿ; ಸರ್ಕಾರಕ್ಕೆ ಸುಪ್ರೀಂ ಸೂಚನೆ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಟ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:five × 1 =
Remember me
