ನವದೆಹಲಿ:ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಸ್ಟ್​ 1ರೊಳಗೆ ತೆರವುಗೊಳಿಸಲಿರುವ ಪ್ರತಿಷ್ಠಿತ ಲೋಧಿ ಎಸ್ಟೇಟ್​ನ ಸರ್ಕಾರಿ ಬಂಗಲೆಯನ್ನು ಪಡೆದುಕೊಳ್ಳಲಿರುವ ಅದೃಷ್ಟವಂತರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆತಿದೆ. ಬಿಜೆಪಿಯ ಸಂಸತ್​ ಸದಸ್ಯ ಅನಿಲ್​ ಬಲೂನಿ ಅವರಿಗೆ ಈ ಬಂಗಲೆಯನ್ನು ಕೊಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಅನಿಲ್​ ಬಲೂನಿ ಬಿಜೆಪಿಯ ವಕ್ತಾರರಾಗಿದ್ದಾರೆ. ಎಸ್​ಪಿಜಿ ಭದ್ರತೆ ಹೊಂದಿರುವ ಮುಖಂಡರಿಗೆ ಮಾತ್ರವೇ ಕೊಡಲಾಗುವ 6B ದರ್ಜೆಯ ಈ ಬಂಗಲೆಯನ್ನು ಇವರಿಗೆ ಕೊಟ್ಟು ಕೇಂದ್ರ ವಸತಿ ಮತ್ತು ನಗರಾಡಳಿತ ಸಚಿವಾಲಯ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಎಂಟು ಪೊಲೀಸರನ್ನು ಕೊಂದ ವಿಕಾಸ್​ ದುಬೆಯದ್ದು ಮನೆಯಲ್ಲ, ಮದ್ದುಗುಂಡಿನ ಕಾರ್ಖಾನೆ; ಇಡೀ ಪ್ರದೇಶ ಸ್ಫೋಟಕ್ಕೆ ಸಂಚು
ಯಾವುದಾದರೂ ಬಂಗಲೆಯನ್ನು ತೆರವುಗೊಳಿಸುವಂತೆ ಯಾರಿಗಾದರೂ ನೋಟಿಸ್​ ಜಾರಿ ಮಾಡಿದ ಎರಡು ತಿಂಗಳೊಳಗಾಗಿ ಆ ಬಂಗಲೆಯನ್ನು ಬೇರೆಯವರಿಗೆ ಹಂಚಿಕೆ ಮಾಡಬಹುದಾಗಿದೆ. ಆ ಬಂಗಲೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ ದಿನದಿಂದಲೇ ಆ ಮುಖಂಡರು ಬಾಡಿಗೆ ಪಾವತಿಸಬೇಕಾಗುತ್ತದೆ. ಅಲ್ಲದೆ, ಆದೇಶ ಹೊರಟ ಎರಡು ತಿಂಗಳೊಳಗಾಗಿ ಆ ಬಂಗಲೆಗೆ ಸ್ಥಳಾಂತರಗೊಳ್ಳಬಹುದಾಗಿದೆ. ಏನಾದರೂ ದುರಸ್ತಿ ಕಾರ್ಯ ಇದ್ದಲ್ಲಿ ಅದನ್ನು ಕೇಂದ್ರೀಯ ಲೋಕೋಪಯೋಗಿ ಇಲಾಖೆ ವತಿಯಿಂದ ದುರಸ್ತಿ ಮಾಡಿಸಲಾಗುವುದು ಎಂದು ವಸತಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಎಸ್​ಪಿಜಿ ಭದ್ರತೆ ಹೊಂದಿದ್ದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು 35, ಲೋಧಿ ಎಸ್ಟೇಟ್​ ಸರ್ಕಾರಿ ಬಂಗಲೆಯಲ್ಲಿ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಅನೇಕ ವರ್ಷಗಳಿಂದ ವಾಸವಾಗಿದ್ದರು. ಆದರೆ, ಕೇಂದ್ರ ಸರ್ಕಾರ ಇತ್ತೀಚೆಗೆ ಅವರಿಗೆ ನೀಡಿದ್ದ ಎಸ್​ಪಿಜಿ ಭದ್ರತೆಯನ್ನು ಹಿಂಪಡೆದು, ಸಿಆರ್​ಪಿಎಫ್​ ಯೋಧರ Z+ ಭದ್ರತೆಗೆ ಇಳಿಸಿತ್ತು. ಈ ಹಿನ್ನೆಲೆಯಲ್ಲಿ ಈ ಬಂಗಲೆಯನ್ನು ತೆರವುಗೊಳಿಸುವಂತೆ ಕೇಂದ್ರ ವಸತಿ ಮತ್ತು ನಗರಾಡಳಿತ ಸಚಿವಾಲಯ ಪ್ರಿಯಾಂಕಾ ಅವರಿಗೆ ನೋಟಿಸ್​ ಜಾರಿ ಮಾಡಿತ್ತು.
ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ತಪ್ಪಿದ ಮತ್ತೊಂದು ಭಾರಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
