ಮುಂಬೈ:ರೈತ ಹೋರಾಟದ ಕಾವು ಹೆಚ್ಚಾದ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಮಾಡುವ ನಿರ್ಧಾರ ಮಾಡಿದ್ದಾರೆ. ಜನವರಿ 30ರಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಅಮ್ಮನೊಂದಿಗೆ ಸಾವಿನ ಮನೆಯ ಕದ ತಟ್ಟಿದ ಅಕ್ಕ-ತಮ್ಮ! ಮನಕಲಕುತ್ತೆ ಈ ಘಟನೆ
ಮಹಾರಾಷ್ಟ್ರದ ಅಹಮದ್​ನಗರ ಜಿಲ್ಲೆಯ ರಾಲೇಗನ್​ ಸಿದ್ಧಿಯಲ್ಲಿರುವ ಯಾದವ್ಬಾಬಾ ದೇವಸ್ಥಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಜನವರಿ 30 ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯಾಗಿರುವುದರಿಂದ ಅದೇ ದಿನದಿಂದ ನನ್ನ ಸತ್ಯಾಗ್ರಹ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಅನುಯಾಯಿಗಳಿಗೆ ಅವರವರ ಸ್ಥಳದಿಂದಲೇ ಸತ್ಯಾಗ್ರಹ ನಡೆಸಲು ಅವರು ಕೋರಿದ್ದಾರೆ.
ಇದನ್ನೂ ಓದಿ:ಮೈಸೂರಿನಲ್ಲಿ ವೈದ್ಯ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ, ಆ ಮನೆಗೆ ದುಷ್ಕರ್ಮಿ ಬಂದಿದ್ದಾದರೂ ಏಕೆ?
“ಕಳೆದ ನಾಲ್ಕು ವರ್ಷಗಳಿಂದ ನಾನು ರೈತರ ಪ್ರಮುಖ ಬೇಡಿಕೆಗಳಿಗಾಗಿ ಆಂದೋಲನ ನಡೆಸುತ್ತಿದ್ದೇನೆ. ರೈತರ ವಿಷಯದಲ್ಲಿ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ತೋರುತ್ತಿದೆ. ರೈತರ ಬಗ್ಗೆ ಸರ್ಕಾರ ಸೂಕ್ಷ್ಮವಾಗಿ ಗಮನಹರಿಸುತ್ತಿಲ್ಲ. ನಾವು ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಮತ್ತೆ ಮತ್ತೆ ಇಟ್ಟಿದ್ದೇವೆ. ಕಳೆದ ಮೂರು ತಿಂಗಳಲ್ಲಿ ನಾನು ಪ್ರಧಾನಿ ಮತ್ತು ಕೇಂದ್ರ ಕೃಷಿ ಸಚಿವರಿಗೆ ಐದು ಬಾರಿ ಪತ್ರಗಳನ್ನು ಬರೆದಿದ್ದೇನೆ. ಸರ್ಕಾರದ ಪ್ರತಿನಿಧಿಗಳು ಈ ಬಗ್ಗೆ ಚರ್ಚಿಸುತ್ತಿದ್ದಾರೆ ಆದರೆ ಅವರು ಸರಿಯಾದ ಪರಿಹಾರವನ್ನು ನೀಡುತ್ತಿಲ್ಲ” ಎಂದು ಅವರು ಹೇಳಿದ್ದಾರೆ. (ಏಜೆನ್ಸೀಸ್​)
ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿ ವಿಡಿಯೋ ಮಾಡಿಕೊಂಡ! ಸೆಕ್ಸ್​ಗೆ ಒಪ್ಪದಿದ್ದರೆ ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಸಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
