ನವದೆಹಲಿ:ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಮಂಗಳವಾರ ನೀಟ್​ ಮತ್ತು ಐಐಟಿ-ಜೆಇಇ(ಮುಖ್ಯ) ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿದೆ. ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯು ಜುಲೈ 26ರಂದು ನಡೆಯಲಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಜೆಇಇ ಮುಖ್ಯ ಪರೀಕ್ಷೆಯು ಜುಲೈ18 ರಿಂದ 23ರವರೆಗೆ ನಡೆಯಲಿದೆ. ಆಗಸ್ಟ್‌ನಲ್ಲಿ ಜೆಇಇ-ಅಡ್ವಾನ್ಸ್ಡ್ ಪರೀಕ್ಷೆ ನಡೆಯಲಿದ್ದು, ನಿಖರ ದಿನಾಂಕ ಶೀಘ್ರ ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
ಇಲಾಖೆಯ ಫೇಸ್​ಬುಕ್​ ಮತ್ತು ಟ್ವಿಟರ್​ ಮೂಲಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಪರೀಕ್ಷಾ ದಿನಾಂಕ ಘೋಷಿಸಿದರು. ಐಐಟಿ-ಜೆಇಇ (ಮುಖ್ಯ) ಪರೀಕ್ಷೆ ಜುಲೈ 18, 20, 21, 22, ಮತ್ತು 23ರಂದು ನಡೆಯಲಿದೆ. ಐಐಟಿ-ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯು ಆಗಸ್ಟ್‌ನಲ್ಲಿ ಯಾವ ದಿನ ನಡೆಯಲಿದೆ ಎಂದು ನಂತರ ತಿಳಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿರಿಲಾಕ್​ಡೌನ್​ನಲ್ಲೇ ರಾಜಕುಮಾರಿ ಕಿರೀಟ ಧರಿಸಿದ ಪಿಗ್ಗಿ!
ಮೇ 3ರಂದು ನಡೆಯಬೇಕಿದ್ದ ನೀಟ್​ ಪರೀಕ್ಷೆಯು ಕರೊನಾ ಲಾಕ್​ಡೌನ್​ನಿಂದಾಗಿ ರದ್ದಾಗಿತ್ತು. ನೀಟ್-2020 ಪರೀಕ್ಷೆಗೆ 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ದೇಶದಲ್ಲಿ ತಲೆದೋರಿರುವ ಕೋವಿಡ್​-19 ಬಿಕ್ಕಟ್ಟಿನಿಂದಾಗಿ ಎರಡು ತಿಂಗಳು ಈ ಪರೀಕ್ಷೆಯನ್ನು ಮುಂಡೂಡಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದ್ದಾರೆ. ಜೂನ್​ನಲ್ಲಿ ಪರೀಕ್ಷೆ ನಡೆಯಲಿದೆ ಎಂಬ ಮಾತೂ ಕೇಳಿ ಬಂದಿತ್ತು. ಈಗ ಎಲ್ಲ ಗೊಂದಲಕ್ಕೂ ಸಚಿವರು ತೆರೆ ಎಳೆದಿದ್ದಾರೆ.
ಸಾಮಾನ್ಯವಾಗಿ ನೀಟ್​ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಒಂದು ತಿಂಗಳ ಮೊದಲೇ ವಿತರಣೆ ಮಾಡಲಾಗುತ್ತಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಇದು ಸಾಧ್ಯವಿಲ್ಲ. ಈ ಬಾರಿ ಪರೀಕ್ಷೆಗೆ ಒಂದು ವಾರ ಇಲ್ಲವೇ 10 ದಿನ ಇರುವಂತೆ ಪ್ರವೇಶಪತ್ರ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪರಿಸ್ಕೃತ ವೇಳಾಪಟ್ಟಿಯ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ಗಳನ್ನು ನೋಡುತ್ತಿರಬೇಕು ಎಂದು ಸೂಚಿಸಿದ್ದಾರೆ.ಕೋವಿಡ್​-19 ಉಂಟು ಮಾಡಿರುವ ಬಿಕ್ಕಟ್ಟಿನಿಂದಾಗಿ ಮುಂಬರುವ ಶೈಕ್ಷಣಿಕ ವರ್ಷದ ಪಠ್ಯಕ್ರಮ ಕಡಿಮೆ ಮಾಡಲು ಸಿಬಿಎಸ್‌ಇ ಮತ್ತು ರಾಜ್ಯ ಶಿಕ್ಷಣ ಮಂಡಳಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.(ಏಜೆನ್ಸೀಸ್​)
ಇದನ್ನೂ ಓದಿರಿಆರೋಗ್ಯ ಸೇತು ಆ್ಯಪ್​ ಇಲ್ಲದಿದ್ದರೆ ಜೈಲು ಸೇರಬೇಕಾಗುತ್ತೆ ಎಚ್ಚರ….!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 6 =
Remember me
