ಶಿಮ್ಲಾ:ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಆ ನೋಟುಗಳನ್ನು ಬದಲಿಸಿಕೊಳ್ಳುವ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದೆ.
ಆದರೆ, ಈ ಮಧ್ಯೆ ಭಕ್ತಾದಿ ಒಬ್ಬರು ದೇವಸ್ಥಾನದ ಕಾಣಿಕೆ ಹುಂಡಿಗೆ ಬರೋಬ್ಬರಿ 8 ಲಕ್ಷ ರೂಪಾಯಿ ದೇಣಿಗೆ ಹಾಕುವ ಮೂಲಕ ಸುದ್ದಿಯಾಗಿರುವ ಘಟನೆ ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ನಡೆದಿದೆ.
ಕಂಗ್ರಾದಲ್ಲಿರುವ ಮಾ ಜ್ವಾಲಾ ದೇವಿ ದೇವಸ್ಥಾನದ ಕಾಣಿಕೆ ಹುಂಡಿಗೆ ವ್ಯಕ್ತಿ ಒಬ್ಬರು 2,000 ಸಾವಿರ ರೂಪಾಯಿ ಮುಖಬೆಲೆಯ ಸುಮಾರು 400 ನೋಟುಗಳನ್ನು ಹಾಕಿದ್ದಾರೆ. ಅಂದರೆ 8 ಲಕ್ಷ ರೂಪಾಯಿ ಹಣವನ್ನು ದೇವಸ್ಥಾನದ ಹುಂಡಿಗೆ ಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸುರೇಶ್​ ಕುಮಾರ್​ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಆಗಾಗ್ಗೆ ಇಂತಹ ಕಾಣಿಕೆಗಳನ್ನು ನೀಡುತ್ತಿರುತ್ತಾರೆ. ಹುಂಡಿಯಲ್ಲಿ ದೊರೆಕಿರುವ ಹಣವನ್ನು ಸಂಪೂರ್ಣವಾಗಿ ಭಕ್ತರ ಸೌಲಭ್ಯಕ್ಕೆ ಬಳಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಂಗ್ರಾ ಜಿಲ್ಲಾ ಡಿಸಿಪಿ ನಿಪುನ್​ ಜಿಂದಾಲ್​ ಈ ಕುರಿತು ತಮ್ಮಗೆ ಯಾವುದೇ ದೂರು ದಾಖಲಾಗಿಲ್ಲ ದೇವಾಲಯದ ಪ್ರದೇಶದ ಸುತ್ತ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
