ಜೈಪುರ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೋರ್ವ ಃಆಸ್ಟೆಲ್​ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಸಿಕಾರ್​ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ನಿತಿನ್​ ಫೌಜ್ದಾರ್​ (18) ಎಂದು ಗುರುತಿಸಲಾಗಿದೆ. ಇವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯ ನಾಡಬಾಯಿ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ. ನೀಟ್​ ಪರೀಕ್ಷೆಗಾಗಿ ಕೋಚಿಂಗ್ ಸೆಂಟರ್‌ನಲ್ಲಿ ತಯಾರಿ ನಡೆಸುತ್ತಿದ್ದರು ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉದ್ಯೋಗ ನಗರ ಪೊಲೀಸ್​ ಠಾಣಾಧಿಕಾರಿ ಸುರೇಂದ್ರ ಡೆಗ್ರಾ, ನೀಟ್​ ಪರೀಕ್ಷೆಗೆ ತಯಾರಿ ನಡೆಸಲೆಂದು ನಿತಿನ್​ ಜೂನ್​ ತಿಂಗಳಲ್ಲಿ ಸಿಕಾರ್​ಗೆ ಆಗಮಿಸಿದ್ದರು. ಖಾಸಗಿ ಕೋಚಿಂಗ್​ ಸೆಂಟರ್​ ಒಂದರಲ್ಲಿ ತರಬೇತಿ ಪಡೆಯುತ್ತಿದ್ದರು. ಶನಿವಾರ ತರಗತಿಗೆ ಹಾಜರಾಗದೇ ಇರುವುದನ್ನು ಗಮಿಸಿದ ಆತನ ಸ್ನೇಹಿತರು ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಇದನ್ನೂ ಓದಿ:ಏಕದಿನ ವಿಶ್ವಕಪ್ 2023| ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ; ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಬಿಸಿಸಿಐ
ಅನುಮಾನಗೊಂಡು ಆತನ ಹಾಸ್ಟೆಲ್​ ರೂಮಿಗೆ ತೆರಳಿ ಪರಿಶೀಲನೆ ನಡೆಸಿದಾಗ ಆತ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಮೂರು ದಿನದ ಅವಧಿಯಲ್ಲಿ ಇದು ಎರಡನೇ ಪ್ರಕರಣವಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಉದ್ಯೋಗ ನಗರ ಪೊಲೀಸ್​ ಠಾಣಾಧಿಕಾರಿ ಸುರೇಂದ್ರ ಡೆಗ್ರಾ ತಿಳಿಸಿದ್ದಾರೆ.
ರಾಜಸ್ಥಾನದ ಕೋಟಾ ಒಂದರಲ್ಲೇ ಬರೋಬ್ಬರಿ 23 ವಿದ್ಯಾರ್ಥಿಗಳು ಈ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲೇ ಇದು ಅತಿ ಹೆಚ್ಚು ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
