ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ.ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ ಕೋಯಿಕ್ಕೋಡ್​ನ ಆಸ್ಪತ್ರೆಯ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಸಚಿವರ ಕಚೇರಿ ಮಾಹಿತಿ ನೀಡಿದೆ. ಒಟ್ಟು ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ. ಈಗಾಗಲೇ ನಿಫಾ ವೈರಸ್​ಗೆ ಇಬ್ಬರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರಲ್ಲಿ 9 ವರ್ಷದ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಇದು ಬಾಂಗ್ಲಾದೇಶದ ರೂಪಾಂತರಿಯಾಗಿದ್ದು, ಸೋಂಕು ತಗುಲುವ ವೇಗ ಕಡಿಮೆ ಇರುತ್ತದೆ, ಹಾಗೆಯೇ ಸಾವಿನ ಪ್ರಮಾಣ ಹೆಚ್ಚಾಗಿರುತ್ತದೆ. ಕೋಯಿಕ್ಕೋಡ್​ನಲ್ಲಿ ಸೋಂಕು ಹರಡಿದ ಕಾರಣ, ಜಿಲ್ಲೆಯ ಸುಮಾರು 11 ವಾರ್ಡ್​ಗಳನ್ನು ಕಂಟೈನ್ಮೆಂಟ್​ ವಲಯ ಎಂದು ಘೋಷಿಸಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಅಧ್ಯಯನಗಳು ಕೋಯಿಕ್ಕೋಡ್ ಮಾತ್ರವಲ್ಲದೆ ಇಡೀ ರಾಜ್ಯವು ಇಂತಹ ಸೋಂಕುಗಳಿಗೆ ಗುರಿಯಾಗುತ್ತಿದೆ ಎಂದು ಕಂಡುಹಿಡಿದಿದೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.
ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ರಾಜ್ಯವು ಜಾಗರೂಕವಾಗಿದೆ ಮತ್ತು ಕೋಯಿಕ್ಕೋಡ್‌ನ ನೆರೆಯ ಜಿಲ್ಲೆಗಳಾದ ಕಣ್ಣೂರು, ವಯನಾಡ್ ಮತ್ತು ಮಲಪ್ಪುರಂ ಕೂಡ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
