ಬೆಂಗಳೂರು:ಎರಡು ಸಾವಿರ ರೂ. ಮುಖಬೆಲೆಯ ನೋಟು ಹಿಂಪಡೆತ ಘೋಷಣೆಯಾದ ಬೆನ್ನಿಗೇ ಕಾಂಗ್ರೆಸ್​ನ ಹಲವರು ನಾಯಕರು ಬಿಜೆಪಿಯನ್ನು ಟೀಕಿಸಿ ಪ್ರತಿಕ್ರಿಯೆ ನೀಡುತ್ತಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಕೂಡ ಟೀಕೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ಮತ್ತೊಂದು ನೋಟ್ ಬ್ಯಾನ್ ಆಗಿದ್ದು, ಬಿಜೆಪಿಗೆ ತನ್ನ ನೀತಿಗಳ ಬಗ್ಗೆ ಸ್ಪಷ್ಟತೆಯೇ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಬ್ಯಾನ್ ಮಾಡುವ ಉದ್ದೇಶ ಇದ್ದಿದ್ದೇ ಆಗಿದ್ದರೆ ಅವರು ಅದನ್ನು 2016ರಲ್ಲಿ ಚಲಾವಣೆಗೆ ತಂದಿದ್ದಾದರೂ ಯಾಕೆ? ಎಂದೂ ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಮಲ್ಟಿಪ್ಲೆಕ್ಸ್​ನಲ್ಲಿ 99 ರೂಪಾಯಿಗೇ ಕನ್ನಡ ಸಿನಿಮಾ!; ಎಷ್ಟು ದಿನ ಈ ವಿಶೇಷ ಕೊಡುಗೆ?
ಭಾರತೀಯ ಜನತಾ ಪಕ್ಷ ತನ್ನ ವೈಫಲ್ಯಗಳಿಂದ ಜನರ ಗಮನವನ್ನು ಬೇರೆ ಕಡೆ ಸೆಳೆಯುವ ಹತಾಶ ಪ್ರಯತ್ನವಾಗಿ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಹಿಂಪಡೆದುಕೊಂಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
