ಕೋಲ್ಕತ:ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭೆ ಚುನಾವಣೆ ನಡೆಯಲು ಇನ್ನು ಕೆಲ ತಿಂಗಳುಗಳು ಬಾಕಿಯಿವೆ. ಆದರೆ ಅಷ್ಟರಲ್ಲಾಗಲೇ, ತೃಣಮೂಲ ಕಾಂಗ್ರೆಸ್​ ಪಕ್ಷದ ನಾಯಕರು ಪಕ್ಷಕ್ಕೆ ಕೈ ಕೊಡಲಾರಂಭಿಸಿದ್ದು, ಮಮತಾ ಬ್ಯಾನರ್ಜಿಗೆ ದೊಡ್ಡ ಆಘಾತವಾಗಿದೆ. ಸುವೆಂದು ಅಧಿಕಾರಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ಸೇರಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:ಸಾರ್ಥಕ ಮದುವೆ; ಮದುವೆಯ ದಿನದಂದು ದಲಿತ ಕುಟುಂಬಕ್ಕೆ ಬೆಳಕು ನೀಡಿದ ನವದಂಪತಿ!
ಮಾಜಿ ಕ್ರಿಕೆಟಿಗ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಲಕ್ಷ್ಮಿ ರತನ್​ ಶುಕ್ಲಾ ಅವರು ಮಂಗಳವಾರದಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದರ ಜತೆ ಹೌರಾ ಜಿಲ್ಲೆಯ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಸದ್ಯದ ಮಟ್ಟಿಗೆ ಕೇವಲ ಶಾಸಕ ಸ್ಥಾನದಲ್ಲಿ ಮಾತ್ರವೇ ಮುಂದುವರಿಯಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಶುಕ್ಲಾ ಅವರು ಸಚಿವ ಸ್ಥಾನವನ್ನು ತ್ಯಜಿಸಿರುವ ಹಿಂದಿರುವ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ ಎನ್ನಲಾಗಿದೆ. ಶುಕ್ಲಾ ಅವರು ರಾಜಕೀಯದಿಂದ ಹೊರಬರುವ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಾರಾ, ಪಕ್ಷ ಬಿಟ್ಟು ಹೊರಬಂದು ಬೇರೆ ಪಕ್ಷ ಸೇರುವ ಚಿಂತನೆಗಳಿವೆಯೇ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಇದನ್ನೂ ಓದಿ:VIDEO| ಕರ್ನಾಟಕ ಮೂಲದ ವ್ಯಕ್ತಿಯಿಂದ ಉಳಿಯಿತು ಮುಂಬೈ ಪ್ರಯಾಣಿಕನ ಪ್ರಾಣ! ಪೊಲೀಸ್ ಪೇದೆ ಸಾಹಸ ಹೇಗಿದೆ ನೋಡಿ
ಶುಕ್ಲಾ ಅವರು ಮೂರು ಬಾರಿ ಭಾರತದಿಂದ ಒಡಿಐ ಪಂದ್ಯವನ್ನಾಡಿದ್ದರು. ಐಪಿಎಲ್​ನಲ್ಲಿ ಕೋಲ್ಕತ ನೈಟ್​ ರೈಡರ್ಸ್​, ದೆಲ್ಲಿ ಡೇರ್​ಡೆವಿಲ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳಿಗೆ ಆಡಿದ್ದರು. (ಏಜೆನ್ಸೀಸ್​)
ತಂಗಿಗಾಗಿ ಅಕ್ಕನನ್ನೇ ನಗ್ನಗೊಳಿಸಿದ! ಸಹಾಯಕ್ಕೆ ಕೇಳಿ ಬರಲಿ ಎಂದು ಕಾದಿದ್ದವನಿಗೆ ಕಾದಿತ್ತು ದೊಡ್ಡ ಶಾಕ್​!

ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
