ನವದೆಹಲಿ:ದೇಶದಲ್ಲಿ ಒಬ್ಬರ ಹಿಂದೊಬ್ಬರಂತೆ ಪೊಲೀಸರ ಆತ್ಮಹತ್ಯೆ ನಡೆಯುತ್ತಿದ್ದು, ಇಂದು ಮತ್ತೊಬ್ಬ ಪೊಲೀಸ್ ಸಾವಿಗೆ ಮೊರೆ ಹೋಗಿದ್ದಾರೆ. ಈತ ಸರ್ವಿಸ್​ ರಿವಾಲ್ವರ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೆಹಲಿಯ ವಾಯವ್ಯ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಪ್ರಶಾಂತ್ ವಿಹಾರ್ ಪೊಲೀಸ್ ಠಾಣೆಯ ಅಮನ್​ದೀಪ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್​ಸ್ಟೆಬಲ್​. ಪೆಟ್ರೋಲ್ ಪಂಪ್ ಪ್ರದೇಶದ ಗೋಡೆ ಪಕ್ಕ ನಿಲ್ಲಿಸಿದ್ದ ಕಾರೊಳಗೆ ಶವ ಇರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ ಪೊಲೀಸರಿಗೆ ಸ್ಯಾಂಟ್ರೊ ಕಾರಿನ ಡ್ರೈವರ್​ ಸೀಟ್​ನಲ್ಲಿ ವಾಸನೆ ಬರುತ್ತಿದ್ದ ಶವ ಕಂಡು ಬಂದಿತ್ತು. ಬಳಿಕ ತನಿಖೆಗಿಳಿದಾಗ ಅದು ಪೊಲೀಸ್ ಕಾನ್​ಸ್ಟೆಬಲ್ ಮೃತದೇಹ ಎಂಬುದು ತಿಳಿಯಿತು.
ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ; ನೇಣಿಗೆ ಕೊರಳೊಡ್ಡಿದ ಸಹಾಯಕ ಸಬ್​ ಇನ್​​ಸ್ಪೆಕ್ಟರ್!​
ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ರಜೆಯಲ್ಲಿದ್ದು, ಆತನ ಮನೆಯವರಿಗೆ ಮಾಹಿತಿ ತಿಳಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅಲ್ಲದೆ ಡೆತ್​ನೋಟ್​ನಂಥ ಯಾವುದೇ ಮಾಹಿತಿ ಲಭಿಸಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪೊಲೀಸ್ ಸಬ್​ ಇನ್​ಸ್ಪೆಕ್ಟರ್​ ಆತ್ಮಹತ್ಯೆ; ನೇಣು ಬಿಗಿದುಕೊಂಡು ಸಾವು..

ಅಡ್ಡಾದಿಡ್ಡಿ ಗುಂಡು ಹಾರಿಸಿದ ಪೊಲೀಸ್, ಮಹಿಳೆಯೊಬ್ಬಳ ಸಾಯಿಸಿ ಆತ್ಮಹತ್ಯೆ

ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ ಹೆಡ್​ಕಾನ್​ಸ್ಟೇಬಲ್ಸ್​ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 5 =
Remember me
