ನವದೆಹಲಿ:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಎದುರಾಗುತ್ತಿದ್ದು, ಈಗ ಮಹತ್ವದ ಬೆಳವಣಿಗೆ ಒಂದರಲ್ಲಿ ಹಿರಿಯ ಕಾಂಗ್ರೆಸ್​ ನಾಯಕ ಡಾ. ಕರಣ್ ಸಿಂಗ್ ಯಾದವ್ ಪಕ್ಷಕ್ಕೆ ಗುಡ್​ ಬೈ ಹೇಳಿದ್ದಾರೆ.
ರಾಜಸ್ಥಾನದ ಅಲ್ವಾರ್​ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದ ಕರಣ್​ ಸಿಂಗ್ ಈ ಬಾರಿಯೂ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರಿಗೆ ಟಿಕೆಟ್​ ನಿರಾಕರಿಸಿದ ಕಾರಣ ಮನನೊಂದು ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಕರಣ್​ ಸಿಂಗ್, ವೈಯಕ್ತಿಕ ಕಾರಣಗಳಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಟ್ಟ ಸೋನಿಯಾ ಗಾಂಧಿ, ಅಶೋಕ್ ಗೆಹ್ಲೋಟ್ ಮತ್ತು ರಾಜೇಶ್ ಪೈಲಟ್ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.
For personal reasons I extend my resignation from the primary membership of the party. I am Grateful to Honourable Smt Sonia Gandhi Ji, Sh Ashok Gehlot and Late Sh Rajesh Pilot Sb for giving me opportunity to serve people through party.@ashokgehlot51@SachinPilot@GovindDotasra
ಇದನ್ನೂ ಓದಿ:ಆರ್​ಸಿಬಿ ಪರ ಹೊಸ ದಾಖಲೆ ಬರೆದ ಎಲ್ಲಿಸ್​ ಪೆರ್ರಿ
ಈ ಚುನಾವಣೆಯಲ್ಲಿ ನಾನು ಸ್ಪರ್ಧಿಸಿ ಗೆಲ್ಲಬೇಕೆಂದು ಜನರು ಬಯಸಿದ್ದರು. ಆದರೆ, ಪ್ರಜಾಪ್ರಭುತ್ವ ಸ್ಥಾಪಿಸಲು ಆರಂಭದಲ್ಲಿ ಆಡಳಿತದ ವಿರುದ್ಧ ಹೋರಾಡಿದ ಕಾಂಗ್ರೆಸ್ ಈಗ ಅವರ ಪ್ರಭಾವದಿಂದ ಕೆಲಸ ಮಾಡುತ್ತಿದೆ, ಅದಕ್ಕಾಗಿಯೇ ನನಗೆ ಟಿಕೆಟ್ ನಿರಾಕರಿಸಲಾಗಿದೆ. ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಗೆ ಆಪ್ತರಾಗಿರುವ ಭನ್ವರ್ ಜಿತೇಂದ್ರ ಸಿಂಗ್​ ರಾಜಸ್ಥಾನದಲ್ಲಿ ಪಕ್ಷವನ್ನು ಹಾಳು ಮಾಡಿದ್ದಾರೆ. ನನ್ನ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿ ಆ ನಂತರ ನಿರ್ಧಾರ ಪ್ರಕಟಿಸುತ್ತೇನೆ ಎಂದು ಡಾ. ಕರಣ್​ ಸಿಂಗ್ ಯಾದವ್​ ತಿಳಿಸಿದ್ದಾರೆ.
2018 ರಲ್ಲಿ ನಡೆದ ಅಲ್ವಾರ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಶಾಲಿಯಾಗಿದ್ದ ಕರಣ್​ ಸಿಂಗ್​ ಮುಂಬರುವ ಚುನಾವಣೆಯಲ್ಲೂ ಆಕಾಂಕ್ಷಿಯಾಗಿದ್ದರು. ಆದರೆ, ಕಾಂಗ್ರೆಸ್​ ಹೈಕಮಾಂಡ್​ ಬೆಹ್ರೋರ್ ವಿಧಾನಸಭಾ ಕ್ಷೇತ್ರದ ಶಾಸಕ ಲಲಿತ್ ಯಾದವ್ ಅವರನ್ನು ಕಣಕ್ಕಿಳಿಸಿದೆ. ರಾಜಸ್ಥಾನದಲ್ಲಿ ಕಳೆದ ಕೆಲ ದಿನಗಳಿಂದ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದ್ದು, ಕಾಂಗ್ರೆಸ್​ನ ಹಲವು ಮಾಜಿ ಶಾಸಕರು ಹಾಗೂ ಸಚಿವರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × one =
Remember me
