ತಿರುವನಂತಪುರಂ:ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಕಲಮಸ್ಸೆರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 53 ವರ್ಷದ ಮಹಿಳೆ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಕೇರಳ ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮಾವೇಶದಲ್ಲಿ ಭಾಗವಹಿಸಿದ್ದ ಇಡುಕ್ಕಿಯ ತೊಡುಪುಳ ಮೂಲದ ಕುಮಾರಿ (53) ಸ್ಫೋಟದಿಂದ ಶೇ.90 ರಷ್ಟು ಸುಟ್ಟ ಗಾಯಗಳಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ದುರಂತದ ಪ್ರಮುಖ ರೂವಾರಿ ಪೊಲೀಸರಿಗೆ ಶರಣಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
