ನವ ದೆಹಲಿ:ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಪಂಜಾಬ್‌ನಲ್ಲಿ ಭಯೋತ್ಪಾದಕ ರಾಮನ್ ಅಲಿಯಾಸ್​ ರಮಣದೀಪ್ ಸಿಂಗ್‌ಗೆ ಸೇರಿದ ಸ್ಥಿರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಖಲಿಸ್ತಾನಿ ಪರ ದರೋಡೆಕೋರ, ಭಯೋತ್ಪಾದಕ ನಂಟು ಹೊಂದಿರುವ ವ್ಯಕ್ತಿಗಳಿಗೆ ಚುರುಕು ಮುಟ್ಟಿಸಿದೆ.
ಇದನ್ನೂ ಓದಿ:‘ವಿಮಾನ ನಿಲ್ದಾಣವಿರಲಿ, ಮೊದಲು ಬಸ್​ ನಿಲ್ದಾಣ ನಿರ್ಮಿಸಿ’: ಆರ್​ಜೆಡಿ ಭರವಸೆಗೆ ನೆಟಿಜನ್ಸ್​ ಪ್ರತಿಕ್ರಿಯೆ ಹೀಗಿದೆ ನೋಡಿ..
ದೆಹಲಿಯ ವಿಶೇಷ ಎನ್‌ಐಎ ನ್ಯಾಯಾಲಯದ ನಿರ್ದೇಶನದ ಮೇರೆಗೆ ಭಯೋತ್ಪಾದನಾ ನಿಗ್ರಹ ಸಂಸ್ಥೆಯು ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಟಿಬ್ಬಿ ಕಲಾನ್ ಪ್ರದೇಶದ ಝೋಕ್ ನೋದ್ ಸಿಂಗ್ ಗ್ರಾಮದಲ್ಲಿ 31 ಕನಾಲ್, 9 ಮರ್ಲಾಸ್ ಮತ್ತು 4 ಸರ್ಸಾಹಿ ಅಳತೆಯ ಆರೋಪಿಗಳ ಭೂಮಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ರಾಮನ್ ಅವರನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಕಳೆದ ವರ್ಷ ಅಂದರೆ 2023ರ ಜುಲೈ 27 ರಂದು ಎನ್‌ಐಎ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿತ್ತು.
ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್), ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ), ಮತ್ತು ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಸೇರಿದಂತೆ ವಿವಿಧ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ನಾಯಕರು ಮತ್ತು ಸದಸ್ಯರು ನಡೆಸಿದ ಭಯೋತ್ಪಾದಕ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಗಳ ಭಾಗವಾಗಿ ಈ ಜಪ್ತಿಯಾಗಿದೆ.
ಭಾರತದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಕಳ್ಳಸಾಗಣೆಯಲ್ಲಿ ತೊಡಗಿರುವ ಈ ಭಯೋತ್ಪಾದಕ ಸಂಘಟನೆಗಳು ಮತ್ತು ರಾಷ್ಟ್ರವ್ಯಾಪಿ ಕಾರ್ಯನಿರ್ವಹಿಸುತ್ತಿರುವ ಸಂಘಟಿತ ಕ್ರಿಮಿನಲ್ ಗ್ಯಾಂಗ್‌ಗಳ ನಡುವಿನ ಸಂಪರ್ಕವನ್ನು ಎನ್‌ಐಎ ತನಿಖೆಗಳು ಪತ್ತೆ ಹಚ್ಚಿವೆ.
ಈ ಪ್ರಕರಣವನ್ನು ಆರಂಭದಲ್ಲಿ 2022ರ ಆಗಸ್ಟ್ 20ರಂದು ಎನ್​ಐಎ ಸ್ವಯಂಪ್ರೇರಿತವಾಗಿ ದಾಖಲಿಸಿದ್ದು, ತನಿಖೆ ಸಕ್ರಿಯವಾಗಿ ನಡೆಯುತ್ತಿದೆ.
ಅಜಯ್ ದೇವಗನ್ ‘ಸಿಂಗಂ’ ಬಿಡುಗಡೆ ಮತ್ತಷ್ಟು ವಿಳಂಬ? ಕಾರಣ ಹೀಗಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + eight =
Remember me
