ನವದೆಹಲಿ:19ನೇ ಏಷ್ಯನ್​ ಗೇಮ್ಸ್​ ಕ್ರೀಡಾಕೂಟದಲ್ಲಿ ಭಾಗವಹಿಸಬೇಕಿದ್ದ ವುಶು ಅಥ್ಲೀಟ್​ಗಳಿಗೆ ಚೀನಾ ಸರ್ಕಾರ ವೀಸಾ ನಿರಾಕರಿಸಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ.
ಏಷ್ಯನ್​ ಗೇಮ್ಸ್​ ಉದ್ಘಾಟನೆಯಲ್ಲಿ ಭಾಗವಹಿಸಲು ಚೀನಾಕ್ಕೆ ತೆರಳಬೇಕಿದ್ದ ಅನುರಾಗ್​ ಠಾಕೂರ್​ ಅವರು ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಈ ಕುರಿತು ವಿದೇಶಾಂಗ ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದೆ.
Our response to media queries on some Indian sportspersons being denied entry into 19th Asian Games:https://t.co/wtoQA8zaDHpic.twitter.com/cACRspcQkD
ಇದನ್ನೂ ಓದಿ:ಕಾವೇರಿ ಜಲವಿವಾದ; ಸ್ಟಾಲಿನ್-ಸೋನಿಯಾರನ್ನು ಮೆಚ್ಚಿಸಲು ಡಿ.ಕೆ. ಶಿವಕುಮಾರ್​ ನೀರು ಬಿಟ್ಟಿದ್ದಾರೆ: ಕೆ.ಎಸ್. ಈಶ್ವರಪ್ಪ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಕೇಂದ್ರ ಸಚಿವ ಕಿರಣ್​ ರಿಜುಜು, ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸ ಬೇಕಾಗಿದ್ದ ಅರುಣಾಚಲಪ್ರದೇಶದ ವುಶು ಅಥ್ಲೀಟ್​ಗಳಿಗೆ ವೀಸಾ ನಿರಾಕರಿಸಿರುವ ಚೀನಾ ಸರ್ಕಾರದ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ.
ಚೀನಾದ ನಡವಳಿಕೆ ಏಷ್ಯನ್​ ಗೇಮ್ಸ್​ ನಿಯಮ ಹಾಗೂ ಕ್ರೀಡಾ ಮನೋಭಾವ ಉಲ್ಲಂಘಿಸಿದಂತಾಗುತ್ತದೆ. ಈ ಕ್ರಮವು ಚೀನಾದ ತಾರತಮ್ಯ ಧೋರಣೆಯನ್ನು ಪ್ರದರ್ಶಿಸುತ್ತದೆ. ಅರುಣಾಚಲಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದ್ದು, ಚೀನಾದ ಕ್ರಮಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಚೀನಾದ ಈ ಕಾನೂನುಬಾಹಿರ ಕ್ರಮದ ವಿರುದ್ಧ ಅಂತರಾಷ್ಟ್ರೀಯ ಒಲಂಪಿಕ್​ ಸಮಿತಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
I strongly condemn this act by China to deny visas to our Wushu Athletes from Arunachal Pradesh who were to participate in the 19th Asian Games in Hangzhou. This violates both the spirit of Sports & also the Rules governing the conduct of Asian Games, which explicitly prohibits…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
