ನವದೆಹಲಿ:ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಹಾಗೂ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರಿಗೆ ಚುನಾವಣಾ ಆಯೋಗ ಇಂದು ನೋಟಿಸ್​ ನೀಡಿದೆ.
ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್​ ಠಾಕೂರ್​ ಅವರು ದೆಹಲಿಯಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತ ದೇಶದ್ರೋಹಿಗಳನ್ನು ಗುಂಡಿಕ್ಕಿ (ಗೋಲಿ ಮಾರೋ) ಎಂದು ಹೇಳಿದ್ದರು. ಈ ವಿಡಿಯೋ ಸಿಕ್ಕಾಪಟೆ ವೈರಲ್​ ಆಗಿತ್ತು. ಅದರ ಬಗ್ಗೆ ದೆಹಲಿ ಸಿಇಒ ಕಚೇರಿ ವರದಿಯನ್ನೂ ಕೇಳಿತ್ತು. ಈಗ ಚುನಾವಣಾ ಆಯೋಗ ಗುರುವಾರದ ಒಳಗೆ ಉತ್ತರಿಸಲು ಸೂಚಿಸಿ ನೋಟಿಸ್​ ನೀಡಿದೆ.
ಬಿಜೆಪಿ ಅಭ್ಯರ್ಥಿ ಮನೀಶ್​ ಚೌಧರಿ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅನುರಾಗ್​ ಠಾಕೂರ್​ ಅವರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಮೊದಲು ವಾಗ್ದಾಳಿ ನಡೆಸಿದರು. ನಂತರ ತಮ್ಮ ಕೈಗಳನ್ನು ಮೇಲೆತ್ತಿ ‘ದೇಶದ್ರೋಹಿಗಳನ್ನು…’ ಎಂದು ಕೂಗಿದ್ದಾರೆ. ಅದಕ್ಕೆ ಪ್ರತಿಯಾಗಿ ನೆರೆದಿದ್ದ ಜನರು ‘ಗೋಲಿಮಾರೋ’ (ಗುಂಡಿಕ್ಕಿ ಕೊಲ್ಲಿ) ಎಂದು ಆಕ್ರೋಶಭರಿತರಾಗಿ ಕೂಗಿರುವ ವಿಡಿಯೋ ಸಿಕ್ಕಾಪಟೆ ವೈರಲ್​ ಆಗಿತ್ತು. ಈ ಬಗ್ಗೆ ಇನ್ನೂ ಅನುರಾಗ್​ ಠಾಕೂರ್​ ಪ್ರತಿಕ್ರಿಯೆ ನೀಡಿಲ್ಲ. ಆದರೆ ಬಿಜೆಪಿ ಮುಖಂಡರೋರ್ವರು ಮಾತನಾಡಿ, ಗೋಲಿ ಮಾರೋ ಎಂದು ಕೂಗಿದ್ದು ಅನುರಾಗ್​ ಠಾಕೂರ್ ಅಲ್ಲ, ಜನರು ಎಂದು ಹೇಳಿದ್ದಾರೆ. ಆದರೆ ಸಚಿವರು ಪ್ರಚೋದನೆ ನೀಡಿದ್ದಾರೆ ಎಂದು ಪರಿಗಣಿಸಿರುವ ಚುನಾವಣಾ ಆಯೋಗ ನೋಟಿಸ್​ ನೀಡಿದೆ.
ಹಾಗೇ ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್​ ವರ್ಮಾ ಕೂಡ ಇಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಿಎಎ ಬಗ್ಗೆ ಮಾತನಾಡುತ್ತ, ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಏನಾಯಿತೋ ಅದೇ ದೆಹಲಿಯಲ್ಲೂ ಆಗುವ ಸಂಭವ ಇದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದ ಶಾಹೀನ್​ಬಾಗ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಮನೆಮನೆಗೆ ನುಗಿ ಹೆಣ್ಣುಮಕ್ಕಳನ್ನು, ಮಹಿಳೆಯರನ್ನು ಅತ್ಯಾಚಾರ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ವಿವಾದಾತ್ಮಕವಾಗಿ ಎಚ್ಚರಿಕೆ ನೀಡಿದ್ದರು.
ಇವರಿಬ್ಬರೂ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ದೆಹಲಿ ಚುನಾವಣಾ ಅಧಿಕಾರಿ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು. ಈಗ ಇಬ್ಬರಿಗೂ ಗುರುವಾರದೊಳಗೆ ಉತ್ತರಿಸುವಂತೆ ಆಯೋಗ ಸೂಚನೆ ನೀಡಿದೆ. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + nineteen =
Remember me
