ನವದೆಹಲಿ:ವಿಶ್ವಕಪ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 50 ನೇ ಶತಕ ಸಿಡಿಸಿದ ನಂತರ, ಅವರ ಪತ್ನಿ ಅನುಷ್ಕಾ ಶರ್ಮಾ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಪತಿ ವಿರಾಟ್ ಕೊಹ್ಲಿಯನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಹುರಿದುಂಬಿಸಲು ಕ್ರೀಡಾಂಗಣಕ್ಕೆ ಬಂದರು. ಕೊಹ್ಲಿ 50ನೇ ಶತಕ ಬಾರಿಸಿದಾಗ, ಅನುಷ್ಕಾ ಶರ್ಮಾ ಕ್ರೀಡಾಂಗಣದ ಗ್ಯಾಲರಿಯಿಂದ ವಿರಾಟ್​​ ಕೊಹ್ಲಿಗೆ ಪ್ಲೇನ್​ ಕಿಸ್​ ನೀಡಿದ್ದಾರೆ.ಇದಕ್ಕೆ ಪ್ರತಿಯಾಗಿ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಮೈದಾನದಿಂದ ಫ್ಲೈಯಿಂಗ್ ಕಿಸ್ ನೀಡಿದರು.
ಪತಿ ಕೊಹ್ಲಿಯ ದಾಖಲೆ ಮುರಿದ ಶತಕದ ನಂತರ, ಅನುಷ್ಕಾ ಅವರನ್ನು ದೇವರ ಮಗು ಎಂದು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಬರೆದಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 70 ರನ್‌ಗಳ ಜಯ ಸಾಧಿಸುವ ಮೂಲಕ ವಿರಾಟ್ ಕೊಹ್ಲಿ ಬುಧವಾರ 50 ODI ಶತಕಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಕೊಹ್ಲಿ ಅವರ 117 ರನ್ ವಿಶ್ವಕಪ್‌ನಲ್ಲಿ ಅವರ ಮೂರನೇ ಶತಕವಾಗಿದೆ.
ದೇವರು ಅತ್ಯುತ್ತಮ ಸ್ಕ್ರಿಪ್ಟ್ ರೈಟರ್! ನನಗೆ ನಿಮ್ಮ ಪ್ರೀತಿಯ ಆಶೀರ್ವಾದ ಸಿಕ್ಕಿರುವ ಜೊತೆಗೆ ವಿರಾಟ್ ಕೊಹ್ಲಿಯ ಪ್ರೀತಿ ಕೂಡ ದೊರೆತಿರುವುದಕ್ಕೆ ಕೃತಜ್ಞನಾಗಿದ್ದೇನೆ. ಮುಂಬರುವ ದಿನಗಳಲ್ಲಿ ವಿರಾಟ್​ ಮತ್ತಷ್ಟು ಎತ್ತರಕ್ಕೆ ಬೆಳೆದು ಯಶಸ್ಸು ಗಳಿಸಿ, ಬೆಳವಣಿಗೆ ಹೊಂದಲಿ. ನೀವು ನಿಜವಾಗಿಯೂ ದೇವರ ಮಗು” ಎಂದು ಅನುಷ್ಕಾ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಹಿಂದಿಕ್ಕಿದ ಕೊಹ್ಲಿ, ಇದು ನನಗೆ ಕನಸಿನಂತೆ ಭಾಸವಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ನ್ಯೂಝಿಲೆಂಡ್ ವಿರುದ್ಧದ ಸೆಮೀಸ್​ನಲ್ಲಿ 117 ರನ್ ಗಳಿಸುವ ಮೂಲಕ ಕೊಹ್ಲಿ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ತೆಂಡೂಲ್ಕರ್ ಅವರ ದಾಖಲೆಯನ್ನೂ ಮುರಿದರು. 2003ರಲ್ಲಿ ಸಚಿನ್ 673 ರನ್ ಗಳಿಸಿದ್ದರೆ, 2023ರ ಏಕದಿನ ವಿಶ್ವಕಪ್‌ನ 10 ಪಂದ್ಯಗಳಲ್ಲಿ ಕೊಹ್ಲಿ ಒಟ್ಟು 711 ರನ್ ಗಳಿಸಿದ್ದಾರೆ. ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ.
ಹರ್ಭಜನ್ ಸಿಂಗ್ ಇಸ್ಲಾಂ ಸೇರಲು ತಯಾರಾಗಿದ್ದರೆಂದ ಪಾಕ್​​ ಮಾಜಿ ನಾಯಕ; ನಾನು ಹೆಮ್ಮೆಯ ಭಾರತೀಯನೆಂದ ಎಂದ ಭಜ್ಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 2 =
Remember me
