ಬೆಂಗಳೂರು:17 ವರ್ಷಗಳ ಬಳಿಕ ಟಿ20 ವಿಶ್ವಕಪ್ ​ ಗೆದ್ದ ಟೀಮ್​ ಇಂಡಿಯಾಕ್ಕೆ,  ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಐತಿಹಾಸಿದ ಸಾಧನೆ ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ.

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತೇನೆ. ನಿಮ್ಮನ್ನು ನನ್ನ ಮನೆ ಎಂದು ಕರೆಯಲು ತುಂಬಾ ಕೃತಜ್ಞರಾಗಿರುತ್ತೇನೆ. ಈಗ ಇದನ್ನು ಆಚರಿಸಲು ನನಗಾಗಿ ಒಂದು ಕಾರಣ ಸಿಕ್ಕಿದೆ ಎಂದು  ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 16 =
Remember me
