ಹೈದರಾಬಾದ್​:ತೆಲುಗಿನ ಖ್ಯಾತ ನಟ ಪ್ರಭಾಸ್ ಮತ್ತು ನಟಿ ನಟರಾದ ಅನುಷ್ಕಾ ಶೆಟ್ಟಿ ಮದುವೆಯಾಗಿ ಮಗು ಇರುವ ಫೋಟೋಗಳು ಸೋಷಿಯಲ್​ಮೀಡಿಯಾದಲ್ಲಿ ಹರಿದಾಡುತ್ತಿದ್ದು, ನಟಿಯ ಪಾಲಕರು ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ಮುಂದಿನ ವಾರದಿಂದ ಮಾರುಕಟ್ಟೆಗೆ ಮೋದಿಯ ‘ಭಾರತ್ ರೈಸ್’.. ಕೆಜಿಗೆ ಕೇವಲ 29 ರೂ.!
ಇದನ್ನೂ ಓದಿ: ಪ್ರಭಾಸ್ ಮದುವೆ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ಅವರು ಮಾಧ್ಯಮಗಳಿಗೆ ಎದುರಾದಾಗಲೆಲ್ಲ ಮದುವೆ ವಿಚಾರ ಪ್ರಸ್ತಾಪವಾಗುತ್ತದೆ. ಹಿಂದೊಮ್ಮೆ ತಿರುಪತಿಯಲ್ಲಿ ನಡೆದ ಆದಿ ಪುರುಷ ಸಿನಿಮಾದ ಪ್ರಿ ರಿಲೀಸ್ ಇವೆಂಟ್​ನಲ್ಲಿಯೂ ಇದೇ ಪ್ರಶ್ನೆ ಎದುರಾಗಿದ್ದಾಗ ಅವರು, ಮದುವೆಯ ಬಗ್ಗೆ ಮೌನ ಮುರಿದಿದ್ದರು. ಮದುವೆ ಪ್ರಶ್ನೆ ಕೇಳಿದಾಗೆಲ್ಲ ಮದುವೆಗೆ ಕಾಲ ಕೂಡಿ ಬರಲಿ. ಇದೇ ತಿರುಪತಿಯಲ್ಲೇ ನಾನು ಮದುವೆ ಮಾಡಿಕೊಳ್ಳುತ್ತೇನೆ ಎಂದಿದ್ದರು.
ಆದರೆ ಮದುವೆ ಯಾವಾಗ ಎನ್ನುವುದನ್ನು ಮಾತ್ರ ಅವರು ಹೇಳಿಕೊಂಡಿಲ್ಲ. ಅವರ ಹೆಸರು ಮಾತ್ರ ನಟಿ ಅನುಷ್ಕಾ ಜೊತೆ ಥಳಕು ಹಾಕಿಕೊಳ್ಳುತ್ತಲೇ ಇತ್ತು. ಅನುಷ್ಕಾ ಮತ್ತು ಪ್ರಭಾಸ್ ಜೊತೆ ನಾಲ್ಕು ಚಿತ್ರಗಳಲ್ಲಿ ನಟಿಸಿದ್ದಾರೆ. ಮೊದಲು ಬಿಲ್ಲಾ ಜೊತೆ ಒಟ್ಟಿಗೆ ಕೆಲಸ ಮಾಡಿದ್ದರು. ಆ ನಂತರ ಮಿರ್ಚಿ ಮತ್ತು ಬಾಹುಬಲಿ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು.
ಇನ್ನು ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಒಳ್ಳೆಯ ಸ್ಕ್ರಿಪ್ಟ್‌ ಸಿಕ್ಕರೆ ಕನ್ನಡದಲ್ಲಿಯೂ ಮಾಡುವೆ ಎಂದಿದ್ದರೂ ಇದುವರೆಗೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಇದೀಗ ತೆಲುಗು ಚಿತ್ರ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾದಲ್ಲಿ ನಟಿಸಿದ್ದು, ಅದು ಕಳೆದ ಸೆಪ್ಟೆಂಬರ್​7ರಂದು ರಿಲೀಸ್​ ಆಗಿದೆ. ಮೂರು ವರ್ಷಗಳ ಬಳಿಕ ಮತ್ತೆ ತೆರೆಮೇಲೆ ಆಗಮಿಸಿದ್ದಾರೆ ಅನುಷ್ಕಾ. ಮಹೇಶ್‌ ಬಾಬು ಪಿಚಿಗೊಲ್ಲ ನಿರ್ದೇಶನದಲ್ಲಿ ಮೂಡಿಬಂದಿದೆ ಈ ಚಿತ್ರ. ಈ ಸಿನಿಮಾದಲ್ಲಿ ಶೆಫ್‌ ಆಗಿ ಅನುಷ್ಕಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ಆದರೆ ಇದೀಗ ಕುತೂಲಹದ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದೇನೆಂದರೆ, ಅನುಷ್ಕಾ ಮತ್ತು ಪ್ರಭಾಸ್​ ಅವರ ಮದುವೆಯ ಫೋಟೋ ವೈರಲ್​ ಆಗಿವೆ. ಸಾಲದು ಎನ್ನುವುದಕ್ಕೆ ಇಬ್ಬರ ಬಳಿ ಒಂದು ಮಗು ಕೂಡ ಇದೆ. ಇದನ್ನು ನೋಡಿ ಫ್ಯಾನ್ಸ್​ ಶಾಕ್​ ಆಗಿದ್ದಾರೆ. ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯ ನಡುವೆಯೇ ಈ ಫೋಟೋಗಳು ವೈರಲ್​ ಆಗಿವೆ. ಕೆಲವರು ಅನುಷ್ಕಾ ಕೆಲ ವರ್ಷ ಗ್ಯಾಪ್​ ತೆಗೆದುಕೊಂಡಿದ್ದು ಇದೇ ಕಾರಣಕ್ಕೇನಾ ಎಂದುಪ್ರಶ್ನಿಸುತ್ತಿದ್ದಾರೆ.
ಆದರೆ ಈ ಫೋಟೋ ವೈರಲ್​ ಆಗುತ್ತಿದ್ದಂತೆ, ಅನುಷ್ಕಾ ಪಾಲಕರು ಪೊಲೀಸ್​ ಠಾಣೆಗೆ ದೂರು ದಾಖಲಿಸಲಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ಕಾರಣ ಏನೆಂದರೆ, ಈ ವೈರಲ್​ ಫೋಟೋಗಳ ಹಿಂದಿರೋ ಅಸಲಿಯತ್ತೇ ಬೇರೆ. ಹೇಳಿ ಕೇಳಿ ಇದು ಆರ್ಟಿಫಿಷಿಯಲ್​ ಇಂಟಲಿಜೆನ್ಸ್​ (ಎಐ-ಎಐ) ಯುಗ. ಫೋಟೋ, ವಿಡಿಯೋಗಳಲ್ಲಿ ಯಾರ ಜೊತೆ ಯಾರನ್ನಾದರೂ ಸೇರಿಸಿ ಏನು ಬೇಕಾದರೂ ಮಾಡುವ ಕಾಲವಿದು. ಈ ಫೋಟೋಗಳೂ ಅದೇ ಎಐನಿಂದ ಸೃಷ್ಟಿ ಮಾಡಿರುವುದು. ಇದು ಅಸಲಿ ಫೋಟೋಗಳು ಅಲ್ಲ. ಆದ್ದರಿಂದ ಮಗಳಿಗೆ ತೇಜೋವಧೆ ಆಗುತ್ತಿರುವುದಾಗಿ ಅನುಷ್ಕಾ ಪಾಲಕರು ದೂರು ದಾಖಲಿಸಿದ್ದಾರೆ.
ಬಾಲಕಿಯ ಶಿರಚ್ಛೇದ : ಪಶ್ಚಿಮ ಬಂಗಾಳದ ಮಾಲ್ಡಾ ಉದ್ವಿಗ್ನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × two =
Remember me
