ಆಂಧ್ರಪ್ರದೇಶದಲ್ಲಿ ವಿಪರೀತ, ಮಳೆ ಪ್ರವಾಹಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು ಅಪಾರ ಹಾನಿಯಾಗಿದೆ.  ಈ ಬಗ್ಗೆ ಗೃಹ ಸಚಿವ ಅಮಿತ್​ ಷಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ, ಪ್ರವಾಹ ಪರಿಹಾರಕ್ಕಾಗಿ 2,250 ಕೋಟಿ ರೂ.ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ ಹಾನಿ ವೀಕ್ಷಣೆಗಾಗಿ ಕೇಂದ್ರದಿಂದ ಅಧ್ಯಯನ ತಂಡವನ್ನು ಕಳಿಸಿ ಎಂದೂ ಕೇಳಿಕೊಂಡಿದ್ದಾರೆ.
ಆಂಧ್ರದಲ್ಲಿ ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೂ ಈವರೆಗೆ ಸುಮಾರು 14 ಮಂದಿ ಸಾವನ್ನಪ್ಪಿದ್ದಾರೆ. ವಿವಿಧ ಇಲಾಖೆಗಳ ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 4,450 ಕೋಟಿ ರೂ. ನಷ್ಟವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ:‘ತನಿಷ್ಕ್​ ಜಾಹೀರಾತಿನಂತೆ ಇದೆ ನನ್ನ ಬದುಕು…’ ಎಂದ ನಟಿ ರಿಚಾ
ಆಂಧ್ರಪ್ರದೇಶ ತುಂಬ ಕಷ್ಟದಲ್ಲಿದ್ದು ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕು. ತುರ್ತಾಗಿ 1,000 ಕೋಟಿ ರೂಪಾಯಿನ್ನಾದರೂ ಬಿಡುಗಡೆ ಮಾಡಬೇಕು ಎಂದಿದ್ದಾರೆ.  ಕೊವಿಡ್​-19 ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿದ್ದು, ಇದೀಗ ಮಳೆ, ಪ್ರವಾಹ ಮತ್ತಷ್ಟು ನಷ್ಟಕ್ಕೆ ಕಾರಣವಾಗಿದೆ ಎಂದೂ ಹೇಳಿದ್ದಾರೆ. (ಏಜೆನ್ಸೀಸ್​)
ಬಸ್​ ಏರಿದ ಗರ್ಭಿಣಿ ನರ್ಸ್​ ಹೊರಡುವ ಮುನ್ನವೇ ಪತಿ ಕಣ್ಣೆದುರಲ್ಲೇ ದುರಂತ ಸಾವು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
