ಅಮರಾವತಿ:ಆಂದ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಎಂಬಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಆಂಧ್ರಪ್ರದೇಶ ಹೈಕೋರ್ಟ್​ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಗ್ರಾಮದಲ್ಲಿ ಆಗಸ್ಟ್​ 4ರಂದು ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಡಿವೇಡು ಪೊಲೀಸರು ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಟಿಡಿಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ:ಚೀನಾ; ಇಸ್ರೇಲ್​ ರಾಜತಾಂತ್ರಿಕ ಅಧಿಕಾರಿಗೆ ಚೂರಿ ಇರಿತ
ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಾಯ್ಡು ವಿರುದ್ಧ ಇನ್ನರ್ ರಿಂಗ್ ರೋಡ್ ಮತ್ತು ಫೈಬರ್ ನೆಟ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳು ಬಾಕಿ ಉಳಿದಿರುವುದರಿಂದ ಬೇಲ್​ ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.
ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಚಂದ್ರಬಾಬು ನಾಯ್ಡು ರಾಜ್ಯಾದ್ಯಂತ ಪ್ರವಾಸ ನಡೆಸಿದ್ದರು. ರ‍್ಯಾಲಿ ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಗ್ರಾಮ ತಲುಪಿದ ವೇಳೆ ವೈಎಸ್​ಆರ್​ಸಿಪಿ ಹಾಗೂ ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + three =
Remember me
