ನವದೆಹಲಿ: ದೇಶದೆಲ್ಲೆಡೆ ಭೀಕರ ರೂಪ ತಳೆದಿರುವ ಕರೊನಾ ವೈರಸ್‌ ಕುರಿತಂತೆ ಜಾಗೃತಿ ಮೂಡಿಸಲು ಹಾಗೂ ಸಂಕಷ್ಟದಲ್ಲಿ ಸಿಲುಕಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ಬಿಜೆಪಿಯ ಮೂಲ ಸಂಸ್ಥೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಪ್ರವೃತ್ತವಾಗಿದೆ. ಈ ಸೋಂಕು ನಿವಾರಣೆಗಾಗಿ ಶ್ರಮಿಸುತ್ತಿರುವ ಸರ್ಕಾರಗಳ ಜತೆ ಆರ್‌ಎಸ್‌ಎಸ್‌ ನಿಂತಿದೆ.
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಲಾಕ್ ಡೌನ್ ಸಮಯದಲ್ಲಿ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸಂಘ ಪರಿವಾರವು ಹೊಸದೊಂದು ಆ್ಯಪ್‌ ತಯಾರಿಸಿದ್ದು, ಇದಕ್ಕೆ ‘ಉತ್ಕರ್ಷ್‌’ ಎಂದು ಹೆಸರು ಇಡಲಾಗಿದೆ. ಈ ಆ್ಯಪ್‌ ಅನ್ನು ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ. ಕೃಷ್ಣ ಗೋಪಾಲ್‌ ಅವರು ಇಲ್ಲಿ ಬಿಡುಗಡೆ ಮಾಡಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಈಗಾಗಲೇ ನಾಲ್ಕು ಆ್ಯಪ್‌ಗಳನ್ನು ಈಚೆಗೆ ಬಿಡುಗಡೆ ಮಾಡಲಾಗಿದ್ದು, ಅದರ ಕಾಲ್‌ಸೆಂಟರ್‌ಗಳು ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸುತ್ತಿದ್ದು ಜನರು ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಡಾ.ಕೃಷ್ಣ ಹೇಳಿದ್ದಾರೆ.
ಪ್ರಸ್ತುತ ದೆಹಲಿಯಲ್ಲಿ ನೆಲೆಸಿರುವ ಈಶಾನ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಈಗಾಗಲೇ 9650530531 ಸಂಖ್ಯೆಯ ಸಹಾಯವಾಣಿ ಆರ್‌ಎಸ್‌ಎಸ್‌ ವತಿಯಿಂದ ಶುರು ಮಾಡಲಾಗಿದೆ. ಆರ್‌ಎಸ್‌ಎಸ್ ಸ್ವಯಂಸೇವಕರು ಇಲ್ಲಿ ಸದಾ ನೆರವಿಗೆ ಸಿದ್ಧರಾಗಿ ನಿಂತಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ದೆಹಲಿಯಲ್ಲಿ ಸಿಲುಕಿರುವ ತಮ್ಮ ಸಂಬಂಧಿಕರಿಗೆ ಸಹಾಯ ಕೋರಿ ಈಶಾನ್ಯದ ಜನರಿಂದ ಹಲವಾರು ಕರೆಗಳನ್ನು ಈ ಸಹಾಯವಾಣಿಯಲ್ಲಿ ಸ್ವೀಕರಿಸಲಾಗುತ್ತಿದೆ.ಆರ್‌ಎಸ್‌ಎಸ್‌ ವತಿಯಿಂದ ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ‘ಮೆಡಿಕೋಸ್’ ಎಂಬ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಇಲ್ಲಿ ಸ್ವಯಂ ಸೇವಕರು ಜಾತಿ, ಮತ, ಧರ್ಮದ ಭೇದ ಎಣಿಸದೆ ಸಹಾಯ ಮಾಡುತ್ತಿದ್ದಾರೆ. ಲಾಕ್‌ಡೌನ್‌ನಿಂದ ಹೆಚ್ಚು ತೊಂದರೆಗೆ ಒಳಗಾದ ಪ್ರದೇಶಗಳಲ್ಲಿ ಪರಿಹಾರ ವಿತರಣಾ ಕಾರ್ಯವನ್ನೂ ಆರಂಭಿಸಲಾಗಿದೆ.
ಇದೀಗ ‘ಉತ್ಕರ್ಷ್‌’ ಆ್ಯಪ್‌ ರೂಪಿಸುವ ಮೂಲಕ ಇನ್ನಷ್ಟು ಜನರಿಗೆ ಸಹಾಯ ಮಾಡಹೊರಟಿದೆ. (ಏಜನ್ಸೀಸ್‌)
ಬಳಸಿ ಬಿಸಾಡಿದ ಮಾಸ್ಕ್ ಗಳನ್ನೇ ಆಯ್ದು ತೊಳೆದು ಇಸ್ತ್ರಿ ಮಾಡಿ ಮಾರುತ್ತಿದ್ದ ಖದೀಮರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 17 =
Remember me
