ಬೆಂಗಳೂರು:ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಅಪ್ಪುಗೆ ಕರ್ನಾಟಕ ರತ್ನ ಯಾರು ಕೊಡಲಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿದೆ.
ನವೆಂಬರ್ 1ಕ್ಕೆ ವಿಧಾನಸೌಧದ ವಿಶಾಲ ಮೆಟ್ಟಿಲುಗಳ ಮೇಲೆ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಮುಖ್ಯ ಅತಿಥಿಯ ಹುಡುಕಾಟ ನಡೆಸುತ್ತಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ಸಾಧಕರನ್ನು ಕರೆಸುವ ಆಲೋಚನೆಯಲ್ಲಿ ಬೊಮ್ಮಾಯಿ ಇದ್ದಾರೆ.
ಈಗಾಗಲೇ ಮೂವರು ಗಣ್ಯರನ್ನು ಸಿಎಂ ಸಂಪರ್ಕಿಸಿದ್ದಾರೆ. ರಜನೀಕಾಂತ್​, ಐಶ್ವರ್ಯಾ ರೈ ಹಾಗೂ ದೀಪಿಕಾ ಪಡುಕೋಣೆ ಅವರನ್ನು ಮುಖ್ಯ ಅತಿಥಿ ಸ್ಥಾನಕ್ಕೆ ಪರಿಗಣಿಸಿದ್ದಾರೆ. ತಮಿಳು ನಟ ರಜನೀಕಾಂತ್​ಗೆ ಮೊದಲ ಆದ್ಯತೆ ನೀಡಲಾಗಿದ್ದು ಅವರು ಒಪ್ಪದಿದ್ದರೆ ನಟಿ ಐಶ್ವರ್ಯಾ ಹಾಗೂ ದೀಪಿಕಾ ಪಡುಕೋಣೆಯನ್ನು ಕರೆಯಲು ನಿರ್ಧರಿಸಲಾಗಿದೆ. ರಜನೀಕಾಂತ್ ಒಪ್ಪುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಸಾಹಿತಿಗಳು, ಚಿತ್ರರಂಗದ ಗಣ್ಯರು, ಸರ್ಕಾರದ ಎಲ್ಲಾ ಸಚಿವರು ಇರಲಿದ್ದಾರೆ. ಈ ವರೆಗೆ 9 ಜನರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಲಭಿಸಿದ್ದು ಪುನೀತ್​ ರಾಜ್​ಕುಮಾರ್​ಗೆ ಸಿನಿಮಾ ಹಾಗೂ ಸಾಮಾಜಿಕ ಸೇವೆಗೆ ಪ್ರಶಸ್ತಿ ಸಿಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
