ಭುವನೇಶ್ವರ್​:ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಒಡಿಶಾ ಪೊಲೀಸರಿಂದ ಬಂಧನವಾಗಿ ಕೆಲ ತಿಂಗಳುಗಳ ಕಾಲ ಜೈಲು ಶಿಕ್ಷ ಅನುಭವಿಸಿ ಮೂರು ವಾರಗಳ ಹಿಂದಷ್ಟೇ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಹಿಳಾ ಬ್ಲಾಕ್​ಮೇಲರ್​ ಅರ್ಚನಾ ನಾಗ್ ಪ್ರಕರಣದಲ್ಲಿ ಆಕೆಯ ಪರಮಾಪ್ತೆಗೆ ಕೋರ್ಟ್​ ಶಾಕ್​ ನೀಡಿದೆ. ನ್ಯಾಯಾಲಯದ ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ.
ಜಾರಿ ನಿರ್ದೇಶನಾಲಯ (ಇಡಿ)ದ ವಿಶೇಷ ನ್ಯಾಯಾಲಯ ಅರ್ಚನಾ ನಾಗ್​ ಆಪ್ತೆ ಶ್ರದ್ದಾಂಜಲಿ ಬೆಹೆರಾಗೆ ಸೂಚನೆ ನೀಡಿದೆ. ಮೂಲಗಳ ಪ್ರಕಾರ ವಕೀಲರೊಂದಿಗೆ ಕೋರ್ಟ್​ ಮುಂದೆ ಹಾಜರಾಗಲು ಅನುಮತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಮತ್ತು ಮೇ 8 ರಂದು ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ. ಇಡಿಯು ಶ್ರದ್ಧಾಂಜಲಿಯನ್ನು ಅವರು ಆರೋಪಿ ಎಂದು ಹೆಸರಿಸಿದ ಬಳಿಕ ಆಕೆಯ ಸಮಸ್ಯೆ ದ್ವಿಗುಣಗೊಂಡಿದೆ.
ಇದನ್ನೂ ಓದಿ: ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಬಂಧಿಸುವಂತೆ ಸುಪ್ರೀಂ ಮೊರೆ ಹೋದ ಪತ್ನಿ ಹಸೀನ್
26 ವರ್ಷದ ಅರ್ಚನಾ ಓರ್ವ ಬ್ಲಾಕ್​ಮೇಲರ್​. ಈಕೆಯ ಹನಿಟ್ರ್ಯಾಪ್​ ಬಲೆಗೆ ಬಿದ್ದ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸಿನಿಮಾ ನಿರ್ಮಾಪಕರು ಸೇರಿದಂತೆ ಪ್ರಭಾವಿಗಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವುದಾಗಿ ಬೆದರಿಸಿ, ಹಣ ಸುಲಿಗೆ ಮಾಡುವುದೇ ಈಕೆಯ ನಿತ್ಯದ ಕೆಲಸವಾಗಿತ್ತು. ಒಡಿಶಾದ ಚಲನಚಿತ್ರ ನಿರ್ಮಾಪಕ ಅಕ್ಷಯ್ ಪಾರಿಜಾ ಅವರನ್ನು ಹನಿಟ್ರ್ಯಾಪ್​ ಬಲೆಗೆ ಬೀಳಿಸುವ ಅರ್ಚನಾರ ಯೋಜನೆ ವಿಫಲವಾದ ಬಳಿಕ ಆಕೆ ಪೊಲೀಸರ ಅತಿಥಿಯಾಗಿದ್ದು, ಆಕೆಯ ಎಲ್ಲ ಪುರಾಣಗಳು ಇದೀಗ ಬಯಲಾಗಿದೆ.
ಅಂದಹಾಗೆ ಅರ್ಚನಾ ನಾಗ್​, 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್​ ಬಲೆಗೆ ಕಡೆವಿರುವುದಾಗಿ ತಿಳಿದುಬಂದಿದೆ. ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ತಲ್ಲಣ ಉಂಟು ಮಾಡಿದೆ. ಹನಿಟ್ರ್ಯಾಪ್​ಗೆ ಒಳಗಾದ ಶಾಸಕರಲ್ಲಿ ಬಹುತೇಕರು ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ನೇತೃತ್ವದ ಬಿಜೆಡಿ ಸರ್ಕಾರದ ಸದಸ್ಯರಾಗಿದ್ದಾರೆ.
ಇದನ್ನೂ ಓದಿ:ಅನಗತ್ಯ ತೇಜೋವಧೆ ಮಾಡುವುದು ಸರಿಯಲ್ಲ: ಜೆಡಿಎಸ್ ಅಭ್ಯರ್ಥಿ ಬಿ.ಆರ್.ರಾಮಚಂದ್ರು ಬೇಸರ
2018 ರಿಂದ 2022 ರವರೆಗಿನ ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ ಅರ್ಚನಾ ಮತ್ತು ಆಕೆಯ ಪತಿ ಜಗಬಂಧು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಗಳಿಸಿದ್ದಾರೆ. ಅರ್ಚನಾ ಹೆಸರಿನಲ್ಲಿ ಮೂರು ಅಂತಸ್ತಿನ ಅರಮನೆಯಂತಹ ಬಂಗಲೆ ಇದೆ. ಮನೆಯಲ್ಲಿ ಪೀಠೋಪಕರಣಗಳ ಬೆಲೆ 40 ಲಕ್ಷ ರೂ. ಎಂಬುದು ಅಚ್ಚರಿಯ ಸಂಗತಿ.(ಏಜೆನ್ಸೀಸ್​)
18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಕೇಸ್​ ಏನಾಯ್ತು? ತನಿಖಾಧಿಕಾರಿಗಳಿಗೆ ಹೈಕೋರ್ಟ್​ ಶಾಕ್​!

18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಹಣದ ವ್ಯವಹಾರ ಕಂಡು ದಂಗಾದ ಇಡಿ ಅಧಿಕಾರಿಗಳು!

ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಐಷಾರಾಮಿ ಮನೆ ಪ್ರವೇಶಿಸಿದ ಪೊಲೀಸರಿಗೆ ಕಾದಿತ್ತು ಸಾಕಷ್ಟು ಅಚ್ಚರಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
