ಸೂರತ್​:ಪೋರ್ನ್​ ವಿಡಿಯೋಗಳನ್ನು ನೋಡುವ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಆರಂಭವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಗುಜರಾತಿನ ಸೂರತ್​ನಲ್ಲಿ ನಡೆದಿದೆ.
ಕತರ್​ಗಮ್​ ಮೂಲದ ಕಿಶೋರ್​ ಪಟೇಲ್​ (33) ಎಂಬಾತ ತನ್ನ ಪತ್ನಿಯ ಕಾಜಲ್​ (30) ಎಂಬಾಕೆಯನ್ನು ಬೆಂಕಿ ಇಟ್ಟು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಇದನ್ನೂ ಓದಿ:ನಟಿ ಶುಭಾ ಪೂಂಜಾ ಮನೆಯಲ್ಲಿ ನಡೆದ ಅತ್ಯಂತ ನೋವಿನ ಸಂಗತಿ ಬಿಚ್ಚಿಟ್ಟ ಆ್ಯಂಕರ್​ ಅನುಶ್ರೀ!
ಭಾನುವಾರ ರಾತ್ರಿ ಕಿಶೋರ್ ತನ್ನ ಮೊಬೈಲ್​ನಲ್ಲಿ ಪೋರ್ನ್​ ವಿಡಿಯೋಗಳನ್ನು ನೋಡುತ್ತಿದ್ದ. ಇದನ್ನು ಗಮನಿಸಿದ ಪತ್ನಿ ಅಂತಹ ವಿಡಿಯೋಗಳನ್ನು ನೋಡುವುದನ್ನು ನಿಲ್ಲಿಸು ಎಂದು ಹೇಳಿದಳು. ಆದರೆ, ಪತ್ನಿಯ ಮಾತಿಗೆ ಕ್ಯಾರೆ ಎನ್ನದ ಕಿಶೋರ್​ ವಿಡಿಯೋ ನೋಡುವುದನ್ನು ಮುಂದುವರಿಸಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಭಾರೀ ವಾಗ್ವಾದ ನಡೆಯಿತು.
ಸೋಮವಾರವು ಕೂಡ ಇದೇ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಮತ್ತೆ ವಾಗ್ವಾದ ನಡೆಯಿತು. ಈ ವೇಳೆ ಇಬ್ಬರ ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿ, ತಾಳ್ಮೆ ಕಳೆದುಕೊಂಡ ಕಿಶೋರ್​, ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಶೇ. 40 ಸುಟ್ಟ ಗಾಯಗಳಿಂದ ಮಂಗಳವಾರ ಬೆಳಗ್ಗೆ ಕಾಜಲ್​ ಕೊನೆಯುಸಿರೆಳೆದಳು. ಸಾವಿಗೂ ಮುನ್ನ ಪೊಲೀಸರ ಮುಂದೆ ಕಾಜಲ್​ ಹೇಳಿಕೆ ನೀಡಿದ್ದು, ಅದರ ಆಧಾರದ ಮೇಲೆ ಕಿಶೋರ್​ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಅಮೆರಿಕ ಅಧ್ಯಕ್ಷೀಯ ಚುನಾವಣೆ; ಕಣಕ್ಕೆ ಧುಮುಕಿದ್ರು ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ
ಅಂದಹಾಗೆ ಆರೋಪಿ ಕಿಶೋರ್​ ಗುಜರಾತಿನ ಪಠಾಣ್​ ಮೂಲದವನು. ಕಾಜಲ್​ ಮುಂಬೈ ಮೂಲದವಳು. ಇಬ್ಬರು ಒಂದು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಮುಂಬೈನ ಡೈಮಂಡ್​ ಆಭರಣ ಫ್ಯಾಕ್ಟರಿಯಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಇಬ್ಬರ ನಡುವೆ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿ ನಂತರ ಇಬ್ಬರು ಮದುವೆ ಆಗಿದ್ದರು. ಕಾಜಲ್​ಗೆ ಇದು ಎರಡನೇ ಮದುವೆ ಆಗಿತ್ತು. ಆಕೆಯ ಮೊದಲ ಗಂಡ 5 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ.(ಏಜೆನ್ಸೀಸ್​)
ರಷ್ಯಾ-ಯೂಕ್ರೇನ್ ಸಮರಕ್ಕೆ ವರ್ಷ; ಯಾರಿಗೂ ಇಲ್ಲ ಹರ್ಷ

ಖಾಸಗಿ ಫೋಟೋ ಸೋರಿಕೆ: ನಟಿ ಆಲಿಯಾ ಭಟ್ ಆಕ್ರೋಶ, ದೂರು ದಾಖಲಿಸಿ ಎಂದ ಮುಂಬೈ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 4 =
Remember me
